ಮೈಸೂರು,16 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಉಂಟಾಗುತ್ತಿದ್ದು, ಲೋಡ್ ಶೆಡ್ಡಿಂಗ್ನಿಂದ ರೈತರ ನೀರಾವರಿ ಪಂಪ್ ಸೆಟ್ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ 2 ರಿಂದ 3 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಹೆಚ್ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆಯಾಗಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೊರಗಡೆಯಿಂದ ವಿದ್ಯುತ್ ಖರೀದಿ ಮಾಡುವಂತೆ ಸೂಚನೆ ನೀಡಿದ್ದೇನೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ. ರೈತರು ನಿರಂತರವಾಗಿ ನಾಲ್ಕು ಗಂಟೆ ತ್ರೀ ಫೇಸ್ ವಿದ್ಯುತ್ ಕೊಟ್ಟರೆ ಸಾಕು ಎಂದು ಹೇಳುತ್ತಿದ್ದಾರೆ. ಆದರೆ ನಿರಂತರ ಐದು ಗಂಟೆ ವಿದ್ಯುತ್ ಕೊಡಲು ಸೂಚಿಸಿದ್ದೇನೆ. ಎಲ್ಲದರ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್
