ಬೆಂಗಳೂರು,13ನವೆಂಬರ್ (ಹಿ.ಸ):
ಆ್ಯಂಕರ್ :ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದಡಿ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಸೋಮವಾರ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ನ್ಯಾಯಾಲಯ ರದ್ದುಪಡಿಸಿದೆ.
ಕುಮಾರಸ್ವಾಮಿ ಅವರು ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. 2ನೇ ಪತ್ನಿ, ಪುತ್ರಿಯ ಮಾಹಿತಿ ನೀಡಿಲ್ಲವೆಂದು ಎಸ್.ಆನಂದ ಎಂಬುವವರು ಆರೋಪ ಮಾಡಿದ್ದರು. ಈ ವಿಚಾರವಾಗಿ ಖಾಸಗಿಯಾಗಿ ದೂರು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ದೂರನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮೊದಲ ಪತ್ನಿಯ ಜೀವಿತಾವಧಿಯಲ್ಲಿ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಅಲ್ಲದೆ, ಚುನಾವಣಾ ಪ್ರಮಾಣ ಪತ್ರದಲ್ಲಿ ಮಕ್ಕಳ ಬಗ್ಗೆ ಉಲ್ಲೇಖಿಸಬೇಕೆಂಬ ನಿಯಮವಿಲ್ಲ. ಹೀಗಾಗಿ ಈ ಪ್ರಕರಣದಲ್ಲಿ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125ಎ ಉಲ್ಲಂಘನೆಯಾಗಿಲ್ಲ ಎಂದು ನ್ಯಾ.ಜೆ.ಪ್ರೀತ್ ಆದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
