
ಕಲಬುರಗಿ,7 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡನ ಅಸಲಿಯತ್ತು ಪೊಲೀಸ್ ತನಿಖೆಯಲ್ಲಿ ಬಟಾಬಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದ್ರೆ, ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
