
ರಾಯಚೂರು., 18 ಡಿಸೆಂಬರ್(ಹಿ.ಸ):
ಆ್ಯಂಕರ್: ರಾಯಚೂರು ಲೋಕಸಭೆ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಆಯ್ಕೆಯ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಟಿ ಹೆಚ್ ಮುನಿಯಪ್ಪ, ಅಬಕಾರಿ ಸಚಿವರಾದ ಆರ್ ಬಿ ತಿಮ್ಮಾಪುರ್ ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್ ಎಸ್ ಬೋಸರಾಜು ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖ ಮುಖಂಡರ ಸಭೆ ನಡೆಸಿದರು.
ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಕಾರ್ಯದಲ್ಲಿ ನಡೆದ ಸಭೆಯಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆಯ ನಿಮಿತ್ಯ ರಾಯಚೂರು ಲೋಕಸಭಾ ಕ್ಷೇತ್ರದ ಗೆಲ್ಲುವ ಕಾಂಗ್ರೆಸ್ ಅಭ್ಯರ್ಥಿಯ ಕುರಿತು ಜಿಲ್ಲಾ ಕಾಂಗ್ರೆಸ್ ಪ್ರಮುಖ ಮುಖಂಡರೊಂದಿಗೆ ಮುಕ್ತ ಸಮಾಲೋಚನೆ ನಡೆಸಿದರು.
ಈ ಬಾರಿ ದೇಶದಲ್ಲಿ ಹಿಂದೆ ಜನಪರ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಒಲವನ್ನು ತೋರುತ್ತಿದ್ದು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದಾರೆ. ನಾವೆಲ್ಲರೂ ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲುವಿಗಾಗಿ ಶ್ರಮಿಸಬೇಕೆಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಹಮ್ಮದ್ ಶಾಲಾಂ,
ಹಿರಿಯರಾದ ರಾಮಣ್ಣ ಇರಬಗೇರಾ, ರಾಯಚೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಸವರಾಜ ರೆಡ್ಡಿ,ಜಯಣ್ಣ ಕೆ ಶಾಂತಪ್ಪ ಜಿಂದಪ್ಪ ಕುರುಬದೊಡ್ಡಿ ಆಂಜನೇಯ, ರುದ್ರಪ್ಪ ಅಂಗಡಿ, ನರಸಿಂಹಲು ಮಾದಗಿರಿ ತಿಂದುಕೊಂಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
