ಚಿಕ್ಕಬಳ್ಳಾಪುರ, 16 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯ ಶ್ರೀರಾಮಮಂದಿರ ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ನನಗೆ ಅಹ್ವಾನ ಬಂದಿದೆ. ಆದರೆ ನಾನು ಅಲ್ಲಿಗೆ ಹೋಗಲಾಗುತ್ತಿಲ್ಲ. ಇದು ದುರದೃಷ್ಟಕರ ಎಂದು ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರದ ಈಶಾ ಆದಿಯೋಗಿ ಕೇಂದ್ರದಲ್ಲಿ ನಂದಿ ವಿಗ್ರಹ ಹಾಗೂ ತ್ರಿಶೂಲ ಪ್ರತಿಷ್ಠಾಪನಾ ಕಾರ್ಯಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಅಯೋಧ್ಯೆ ಕಾರ್ಯಕ್ರಮ ಎರಡು ತಿಂಗಳ ಹಿಂದೆ ನಿಗದಿಯಾಗಿದೆ. ಆದರೆ ನನಗೆ ಆಸ್ಟ್ರೇಲಿಯಾದಲ್ಲಿ ಎಂಟು ತಿಂಗಳ ಹಿಂದೆಯೇ ಕಾರ್ಯಕ್ರಮ ನಿಗದಿಯಾಗಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಆ ಕಾರ್ಯಕ್ರಮ ಇರುವ ಕಾರಣದಿಂದ ಅಯೋಧ್ಯೆಯ ರಾಮಮಮಂದಿರ ಉದ್ಗಾಟನಾ ಕಾರ್ಯಕ್ರಮಕ್ಕೆ ಹೋಗಲಾಗುತ್ತಿಲ್ಲ. ಇದು ನನ್ನ ದುರದೃಷ್ಟ ನಾನು ಹೋಗಲಾಗುತ್ತಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್
