


ಬಳ್ಳಾರಿ, 3 ಡಿಸೆಂಬರ್(ಹಿ.ಸ):
ಆ್ಯಂಕರ್: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಮೇಲ್ಭಾಗದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳ ಜೊತೆಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಸುಸಜ್ಜಿತವಾದ ಆಡಿಟೋರಿಯಂ ನಿರ್ಮಾಣಕ್ಕಾಗಿ ಭೂಮಿಪೂಜೆಯನ್ನು ಭಾನುವಾರ ನೆರವೇರಿಸಲಾಯಿತು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ. ಮಹಾರುದ್ರಗೌಡ ಅವರು, ಪೂಜೆಯನ್ನು ನೆರವೇರಿಸಿ, ಅತ್ಯಲ್ಪಕಾಲದಲ್ಲಿ ಸುಸಜ್ಜಿತವಾದ ಮತ್ತು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿದ 700 ರಿಂದ 1000 ಜನರು ಕೂಡಬಹುದಾದ ಆಡಿಟೋರಿಯಂ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಯಶವಂತ ರಾಜ್ ನಾಗಿರೆಡ್ಡಿ, ಉಪಾಧ್ಯಕ್ಷರುಗಳಾದ ಎ. ಮಂಜುನಾಥ್, ಎಸ್. ದೊಡ್ಡನಗೌಡ, ಸೊಂತ ಗಿರಿಧರ್, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ ಬಾಬು, ಜಂಟಿ ಕಾರ್ಯದರ್ಶಿಗಳಾದ, ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಕಮಿಟಿಗಳ ಚೇರ್ಮನ್ಗಳು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
