ಬೆಂಗಳೂರು,20ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ. ಕೆ.ಆರ್.ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ- ಚಲ್ಲಘಟ್ಟ ವಿಸ್ತೃತ ಮಾರ್ಗವನ್ನು ಬೆಳಗ್ಗೆ 11.45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಅಕ್ಟೋಬರ್ 9ರಿಂದಲೇ 2 ವಿಸ್ತೃತ ಮಾರ್ಗದಲ್ಲಿ ಮೆಟ್ರೋ ಸಂಚಾರ ಮಾಡುತ್ತಿದೆ.
ಹಿಂದೂಸ್ತಾನ್ ಸಮಾಚಾರ್
