ದೆಹಲಿ, 19 ಡಿಸೆಂಬರ್(ಹಿ.ಸ):
ಆ್ಯಂಕರ್ :
ಪ್ರಧಾನ ಮಂತ್ರಿಗಳು ಭೇಟಿಗೆ ಸಮಯ ಕೊಡ್ತಿಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಭೇಟಿಗೆ ಸಮಯ ನೀಡಿದ್ದಾರೆ. ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿ -ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಲಿದ್ದಾರೆ. ಪ್ರಧಾನಿ ಬಳಿ ಬರ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಲಿದ್ದಾರೆ. ಬರ ಪರಿಹಾರದ ಜೊತೆ ಗ್ಯಾರಂಟಿ ಅಕ್ಕಿಗೂ ಅರ್ಜಿ ಹಾಕಲಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಆದ ಬಳಿಕ ಸಿಎಂ ಸಿದ್ದರಾಮಯ್ಯ 2ನೇ ಸಲ ಪ್ರಧಾನಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿ ಆಗುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
