ಬೆಂಗಳೂರು,26ಅಕ್ಟೋಬರ್ (ಹಿ.ಸ):
ಆ್ಯಂಕರ್ :ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆ ಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ನಂತರ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುವರ್ಣ ಮಹೋತ್ಸವ ಆಚರಣೆಗ ಚಾಲನೆ ನೀಡಿ ಮಾತನಾಡಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಐಐಎಂ ಬಿ ಕ್ಯಾಂಪಸ್ ಕುರಿತ ಪುಸ್ತಕ ಬಿಡುಗಡೆ ಮತ್ತು ಐಐಎಂಬಿ ಕುರಿತಾದ ಸಾಕ್ಷ್ಯಚಿತ್ರವನ್ನೂ ಪ್ರದರ್ಶಿಸಲಾಗುತ್ತದೆ ಎಂದು ಐಐಎಂ ಬೆಂಗಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನ ಸಂಸ್ಥಾಪನಾ ದಿನ ಅಕ್ಟೋಬರ್ 28 ಆಗಿದ್ದು, ಅಂದು ಕಾರ್ಪೊರೇಟ್ ಎಕ್ಸಲೆನ್ಸ್ ಕುರಿತು ಹಳೆ ವಿದ್ಯಾರ್ಥಿಗಳ ನಾಯಕತ್ವದ ಶೃಂಗ ನಡೆಯಲಿದೆ. ಸಂಸ್ಥೆಯ ಸಭಾಂಗಣದಲ್ಲಿ ನಿರ್ದೇಶಕರ ಸಂಸ್ಥಾಪನಾ ದಿನದ ಭಾಷಣ ಇರಲಿದೆ.
ಹಿಂದೂಸ್ತಾನ್ ಸಮಾಚಾರ್
