
ಬೆಳಗಾವಿ, 8 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಾಳೆಯಿಂದ ಅಂದರೆ ಡಿಸೆಂಬರ್ 9ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ.
ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಘೋಷಿಸಲಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
