• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ-ಸಿದ್ದರಾಮಯ್ಯ
Regional

ಎಲ್ಲರಿಗೂ ಕೊಳ್ಳುವ ಶಕ್ತಿ ತುಂಬಲು ಸರ್ಕಾರ ಕಾರ್ಯಪ್ರವೃತ್ತವಾಗಿದೆ-ಸಿದ್ದರಾಮಯ್ಯ

CliQ INDIA
Last updated: January 16, 2024 4:36 am
CliQ INDIA
Share
2 Min Read
SHARE

ಹಾವೇರಿ (ಚಿಕ್ಕ ಬಾಸುರ), 15 ಜನವರಿ(ಹಿ.ಸ):

ಆ್ಯಂಕರ್ :

ಸಾರ್ವತ್ರಿಕ ಮೂಲ ಆದಾಯದ ತತ್ವದ ಆಧಾರದ ಮೇಲೆ ಎಲ್ಲರಿಗೂ ಕೊಳ್ಳುವ ಶಕ್ತಿ ಬರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ನೊಳಂಬ ಲಿಂಗಾಯತ ಸಂಘ ಬೆಂಗಳೂರು ವತಿಯಿಂದ ಆಯೋಜಿಸಿರುವ ಶ್ರೀ ಗುರು ಶಿವಯೋಗಿ ಸಿದ್ದರಾಮೇಶ್ವರರ 851 ನೇ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರ ಎಲ್ಲಾ ಸಮಾಜದಲ್ಲಿನ ಬಡವರನ್ನು ಮುಖ್ಯ ವಾಹಿನಿಗೆ ತಂದು, ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಬೇಕು ಎಂದು ಪ್ರಯತ್ನ ಮಾಡುತ್ತಿದೆ. ಅನುಭವ ಮಂಟಪದಲ್ಲಿ ಸಮಸಮಾಜ ನಿರ್ಮಾಣ ಮಾಡುವ ಬಗ್ಗೆ ಚರ್ಚೆಗಳಾಗುತ್ತಿತ್ತು. ಅಂಥ ಸಮಾಜವನ್ನು ಬಸವಾದಿ ಶರಣರು, ಸಿದ್ದರಾಮೇಶ್ವರರು ಬಯಸಿದ್ದರು ಎಂದರು.

ಆತ್ಮಾವಲೋಕನ ಅಗತ್ಯ

ಶಿವಯೋಗಿ ಸಿದ್ದರಾಮೇಶ್ವರರು ಬಸವಣ್ಣನವರ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 12 ನೇ ಶತಮಾನದಲ್ಲಿ ಶರಣರು ವಚನಗಳನ್ನು ರಚಿಸಿ ಜೀವನದ ಮೌಲ್ಯಗಳನ್ನು ತಿಳಿಸುವ ಪ್ರಯತ್ನ ಮಾಡಿದ್ದಾರೆ. ಜೀವನ ಮೌಲ್ಯಗಳನ್ನು ಮಾವು ಅರಿಯಬೇಕು. ಹುಟ್ಟು ಆಕಸ್ಮಿಕ, ಸಾವು ಖಚಿತವಾದರೂ ಹುಟ್ಟು ಸಾವುಗಳ ಮಧ್ಯೆ ನಮ್ಮ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ನಮ್ಮ ಬದುಕಿನ ಅವಧಿಯಲ್ಲಿ ನಮ್ಮ ಬದುಕನ್ನು ನಾವು ಸಾರ್ಥಕಗೊಳಿಸಿಕೊಂಡಿದ್ದೇವೆಯೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಸವಾದಿ ಶರಣರು ಮನುಷ್ಯರಾಗಿ ಬದುಕಬೇಕೆಂದು ಹೇಳಿದ್ದಾರೆ. ಜೀವನದ ಸಾರವನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ ಎಂದರು.

ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ

ವಚನ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಮಾತ್ರವಲ್ಲದೆ ವಿಶ್ವ ಸಾಹಿತ್ಯಕ್ಕೂ ದೊಡ್ಡ ಕೊಡುಗೆ ನೀಡಿದೆ. ಧರ್ಮಾಚರಣೆ, ಆಧ್ಯಾತ್ಮ ಜನರ ಭಾಷೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಜನರಿಗೆ ಓದು ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಜನರ ಭಾಷೆಯಲ್ಲಿ ಇದನ್ನು ತಿಳಿಸಿದ್ದು ಬಸವಣ್ಣ ಎಂದರು.

ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ

ಶರಣ ಸಾಹಿತ್ಯದಲ್ಲಿ ಬಸವಣ್ಣ, ಚೆನ್ನಬಸವಣ್ಣ, ಅಕ್ಕಮಹಾದೇವಿ ಅಲ್ಲಮಪ್ರಭು, ಸಿದ್ದರಾಮೇಶ್ವರರು ಪ್ರಮುಖರು. ಬಸವಾದಿ ಶರಣರು ಮುಖ್ಯ ವಾಗಿ ನೀಡಿದ ಮೌಲ್ಯ ಕಾಯಕ ಮತ್ತು ದಾಸೋಹ. ಸತ್ಯವೇ ಸ್ವರ್ಗ, ಮಿತ್ಯವೆ ನರಕ ಎಂದ ಶರಣರು, ಮೌಢ್ಯಗಳನ್ನು ತಿರಸ್ಕರಿಸಿದ್ದರು.

ಬಸವಾದಿ ಶರಣರು ವೈಚಾರಿಕ, ವೈಜ್ಞಾನಿಕ ವಿಚಾರಗಳನ್ನು ಜನರ ಮುಂದಿಟ್ಟಿದ್ದಾರೆ. ಕಂದಾಚಾರ, ಮೂಢನಂಬಿಕೆ, ಮೌಢ್ಯಗಳನ್ನು ತಿರಸ್ಕಾರ ಮಾಡಿದ್ದಾರೆ ಎಂದರು.

ಸಿದ್ದರಾಮೇಶ್ವರರ ಬೋಧನೆಯನ್ನು ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ಗೌರವ

ಮನುಷ್ಯರು ಚಾತುರ್ವಣ ವ್ಯವಸ್ಥೆಯನ್ನು ಸ್ವಾರ್ಥಕ್ಕಾಗಿ ಮಾಡಿಕೊಂಡಿದ್ದಾರೆ . ಯಾವ ದೇವಸ್ಥಾನದೊಳಗೆ ಪ್ರವೇಶವಿಲ್ಲದ ದೇವಸ್ಥಾನದೊಳಗೆ ಪ್ರವೇಶಿಸಬೇಡಿ, ನೀವೇ ದೇಗುಲ ನಿರ್ಮಿಸಿ ಪೂಜಿಸಿ ಎಂದು ನಾರಾಯಣ ಗುರುಗಳು ಕರೆ ನೀಡಿದ್ದರು. ಮನುಷ್ಯ ಮನುಷ್ಯ ನನ್ನು ಪ್ರೀತಿಸಬೇಕು. ಮನುಷ್ಯರಾಗಿರಬೇಕು ಎಂದು ಹೇಳಿದರೆ ಕೆಲವರಿಗೆ ಕೋಪ ಬರುತ್ತದೆ ಎಂದರು. ಸಿದ್ದರಾಮೇಶ್ವರನ ಜಯಂತಿ ಆಚರಿಸಿದಾಗ ಅವರ ಬೋಧನೆಯನ್ನು ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ಗೌರವ ಎಂದರು.

ಭರವಸೆ

ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹಾಸನದಲ್ಲಿ ಸುಮಾರು 40,000 ಶಾಖೆಗಳಿದ್ದು, ಅನುದಾನ ಕೋರಿರುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್

You Might Also Like

ವಿಶೇಷ ತರಬೇತಿ ಶಿಬಿರ ಆಯೋಜನೆ – Hindusthan Samachar Kannada
ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ ಬೈಕ್‌ಗಳು ಟ್ರಾಫಿಕ್ ಪೊಲೀಸ್ ವಶಕ್ಕೆ
ಪಂಚ ಗ್ಯಾರಂಟಿಗಳ ಅನುಷ್ಠಾನ ಸಮಿತಿಗಳ ರಚನೆ
ಪಾಕ್ ಪರ ಘೋಷಣೆ ಕೂಗಿರುವುದು ವರದಿಯಲ್ಲಿ ದೃಢ: ಬಿಜೆಪಿ
ತಿಪ್ಪಣ್ಣನವರಿಗೆ ಅಕ್ಷರ ನಮನ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಿದ್ದರಾಮಯ್ಯನವರ ಕಾರ್ಯಗಳು ‘ಕಾಲನೇಮಿ’ ನಂತಿವೆ – Hindusthan Samachar Kannada
Next Article ನಡ್ಡಾ ಭೇಟಿ ಮಾಡಿದ ಆರ್. ಅಶೋಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?