• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ; ಕಿಡಿಗೇಡಿಗಳ ಬಂಧನಕ್ಕೆ ಎರಡು ತಂಡ ರಚನೆ
Regional

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ; ಕಿಡಿಗೇಡಿಗಳ ಬಂಧನಕ್ಕೆ ಎರಡು ತಂಡ ರಚನೆ

CliQ INDIA
Last updated: January 5, 2026 3:05 pm
CliQ INDIA
Share
1 Min Read
SHARE

ಬೆಂಗಳೂರು, 05 ಜನವರಿ (ಹಿ.ಸ.) :

ಆ್ಯಂಕರ್ : ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆಯ ಮೇಲೆ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಇಬ್ಬರು ಯುವತಿಯರಿಗೆ ತಲೆಗೆ ಗಾಯಗಳಾಗಿವೆ. ಘಟನೆ ಜೆಜೆ ನಗರದ ವಿಎಸ್ ಉದ್ಯಾನವನದ ಬಳಿ ಸಂಭವಿಸಿದೆ.

ತಮಟೆ ಸದ್ದಿಗೆ ಹೆಜ್ಜೆ ಹಾಕುತ್ತಾ ಸಾಗುತ್ತಿದ್ದ ಮಾಲಾಧಾರಿಗಳ ಮೇಲೆ ಕತ್ತಲಿನಿಂದ ಕಲ್ಲುಗಳನ್ನು ಎಸೆಯಲಾಗಿದೆ. ಪರಿಣಾಮ ಇಡೀ ಪ್ರದೇಶದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಕಲ್ಲೇಟಿನಿಂದ ಇಬ್ಬರು ಯುವತಿಯರ ತಲೆಯಿಂದ ರಕ್ತಸ್ರಾವವಾಗಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಬೆನ್ನಲ್ಲೇ ಆಕ್ರೋಶಗೊಂಡ ಓಂ ಶಕ್ತಿ ಮಾಲಾಧಾರಿಗಳು ಜೆಜೆ ನಗರ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು.

“ಅನ್ಯ ಕೋಮಿನವರು ಉದ್ದೇಶಪೂರ್ವಕವಾಗಿ ಕಲ್ಲೆಸೆದಿದ್ದಾರೆ. ಪ್ರತಿದಿನ ಭಯದಲ್ಲೇ ಬದುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

ಕತ್ತಲಿನಿಂದ ಕಲ್ಲು ತೂರಾಟ ನಡೆದಿರುವುದರಿಂದ ಆರೋಪಿಗಳನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಗಾಯಾಳು ಯುವತಿಯ ಸಂಬಂಧಿ ತಿಳಿಸಿದ್ದಾರೆ.

ಈ ಸಂಬಂಧ ಓಂ ಶಕ್ತಿ ಮಾಲಾಧಾರಿಗಳ ಅಧ್ಯಕ್ಷ ಶಶಿಕುಮಾರ್ ನೀಡಿದ ದೂರಿನ ಆಧಾರದಲ್ಲಿ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಸಂಸದ ಪಿ.ಸಿ. ಮೋಹನ್ ಭೇಟಿ ನೀಡಿ, ಈ ಕ್ಷೇತ್ರದಲ್ಲಿ ಜನರು ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರ್ಮಿಕ ಆಚರಣೆಗಳಿಗೂ ಅಡ್ಡಿ ಏಕೆ ಎಂದು ಪ್ರಶ್ನಿಸಿದರು.

ಪ್ರಕರಣದ ತನಿಖೆಗೆ ಇಬ್ಬರು ಇನ್ಸ್‌ಪೆಕ್ಟರ್‌ಗಳ ತಂಡ ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ತಿಳಿಸಿದ್ದಾರೆ.

ಘಟನೆ ಬಳಿಕ ಜೆಜೆ ನಗರ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಕಾಯಕ ನಿಷ್ಠೆ ಕಂಡು ಕೊಂಡವರು ಶಿವಶರಣರು: ಬಿ.ಶ್ವೇತ
ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯಿಂದ ಬೇಸಿಗೆ ಶಿಬಿರ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮೂರು ವಿಭಾಗಗಳಲ್ಲಿ ರ್‍ಯಾಂಕ್
ಇಂದು ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಇಂದು ದೆಹಲಿಯಲ್ಲಿ ಮಧ್ಯ ಪ್ರದೇಶ ರಸ್ತೆ ಯೋಜನೆಗಳ ಪರಿಶೀಲನೆ
Next Article ಮನೆಗಳ್ಳರಿಬ್ಬರ ಬಂಧನ ; ಬಂಧಿತರಿಂದ ಚಿನ್ನ ಜಪ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?