ಬಳ್ಳಾರಿ, 2 ಜನವರಿ(ಹಿ.ಸ):
ಆ್ಯಂಕರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದಲ್ಲಿ ಸಾರಿಗೆ ಕುರಿತಾದ ಸಲಹೆ ಹಾಗೂ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸಲು 24*7 ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಸಾರ್ವಜನಿಕರು ತಮ್ಮ ಸಲಹೆ, ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 6366423885 ಗೆ ಕರೆ ಮಾಡಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ಬಾನ್ ಅವರು ತಿಳಿಸಿದ್ದಾರೆ.
