



ಹೊಸಪೇಟೆ, 1 ನವೆಂಬರ್ (ಹಿ.ಸ):
ಆ್ಯಂಕರ್ : ರಾಜ್ಯದ ಕರ್ನಾಟಕ ಎಂದು ಮರು ನಾಮಕರಣ ಮಾಡಿ 50ವರ್ಷಗಳಾಗಿದ್ದು, ಕನ್ನಡಿಗರ ಕನ್ನಡಾಭಿಮಾನವು ದೇಶದಲ್ಲೇ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ.
ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹೊಸಪೇಟೆ ನಗರಸಭೆ ಇವರ ಸಹಯೋಗದಲ್ಲಿ ಬುಧವಾರ ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ 68ನೇ ಕರ್ನಾಟಕ ರಾಜೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುμÁ್ಪರ್ಚನೆ ಹಾಗೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಪಥಸಂಚಲನ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿ, ಕನ್ನಡ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.
ಇಂದಿನ ಕರ್ನಾಟಕ ರಾಜ್ಯೋತ್ಸವವು ನಮಗೆಲ್ಲರಿಗೂ ವಿಶೇಷವಾದ ದಿನವಾಗಿದೆ. ಕನ್ನಡಾಂಭೆಯನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ. ಈ ನೆಲದಲ್ಲಿ ಜನಿಸಿದ ನಾವೆಲ್ಲರೂ ಪುಣ್ಯವಂತರು. ಮೈಸೂರು ಎಂದು ಹೆಸರಿದ್ದ ರಾಜ್ಯವನ್ನು 1973ರ ನವಂಬರ್ 1ರಂದು `ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಯಿತು. ಇದಕ್ಕೆ ಮುಖ್ಯ ಕಾರಣ ಕರ್ತರಾದ ಅಂದಿನ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರು. ಇಂದು ಈ ಹೆಸರು ಕನ್ನಡಿಗರಿಗೆ ಹೆಮ್ಮೆಯಾಗಿದ್ದು, ರಾಜ್ಯವು ಕರ್ನಾಟಕ ಎಂದು ನಾಮಕರಣಗೊಂಡು ಇಂದಿಗೆ 50 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯೋತ್ಸವನ್ನು ವಿಭಿನ್ನವಾಗಿ ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಜ್ಯೋತಿರಥಯಾತ್ರೆ ಕಾರ್ಯಕ್ರಮವನ್ನು ನ.2ರಂದು ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು.
ಶಾಸಕರಾದ ಹೆಚ್.ಆರ್.ಗವಿಯಪ್ಪ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಹೊಸಪೇಟೆ ನಗರಸಭೆ ಅಧ್ಯಕ್ಷೆ ಎ.ಲತಾ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಹೊಸಪೇಟೆ ಉಪವಿಭಾಗಾಧಿಕಾರಿ ಮಹದ್ಅಲಿ ಅಕ್ರಮ μÁಹ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಆಕರ್ಷಕ ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು:
ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಪೆÇಲೀಸ್, ಗೃಹರಕ್ಷದಳ, ಎನ್.ಸಿ.ಸಿ., ಗೈಡ್ಸ್, ಸೇವಾದಳ ಒಳಗೊಂಡಂತೆ ಒಟ್ಟು ಏಳು ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಮಕ್ರಮಗಳು ನಡೆದವು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸಿದರು.
ಕಾರ್ಯಕ್ರಮದಲ್ಲಿ ಹಲವು ಗಣ್ಯರು, ಕನ್ನಡಪರ ಹೋರಾಟಗಾರರು, ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು, ಅಂಗನವಾಡಿ-ಆಶಾ ಕಾರ್ಯಕರ್ತೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
