ಬೆಂಗಳೂರು, 2 ಡಿಸೆಂಬರ್(ಹಿ.ಸ):
ಆ್ಯಂಕರ್ :
ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಡಿಸೆಂಬರ್ 7ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಬೀದರ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.
ತಮಿಳುನಾಡು, ಪಾಂಡಿಚೇರಿ, ಆಂದ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್
