ಬೆಂಗಳೂರು, 13ಡಿಸೆಂಬರ್(ಹಿ.ಸ):
ಆ್ಯಂಕರ್ :
ರಾಜ್ಯದಲ್ಲಿ ಬುಧವಾರ ಸ್ವಲ್ಪ ಮಳೆಯಾಗಲಿದೆ . ದಕ್ಷಿಣ ಒಳನಾಡು,ಮಲೆನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಭಾಗದಲ್ಲಿ ಬಿಸಿಲು ಇರಲಿದೆ. ಚಾಮರಾಜನಗರ, ಮೈಸೂರು ಮತ್ತು ಮಂಡ್ಯದಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಕೊಡಗು ಮತ್ತು ಹಾಸನದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಸೇರಿದಂತೆ ಉತ್ತರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿಯಲ್ಲಿ ಬಿಸಿಲು ಇರಲಿದೆ. ದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಭಾರತ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳವರೆಗೆ ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಮತ್ತು ಈ ರಾಜ್ಯಗಳಿಗೆ ಮಂಜು ಎಚ್ಚರಿಕೆಯನ್ನು ನೀಡುತ್ತದೆ.
ಡಿಸೆಂಬರ್ 15 ರವರೆಗೆ ಹಲವಾರು ರಾಜ್ಯಗಳಿಗೆ ಮಂಜು ಮುುಸುಕಿದ ವಾತಾವರಣ ಇರಲಿದೆ. ಇಎಂ ಡಿ ಹೇಳಿಕೆಯ ಪ್ರಕಾರ, ಉತ್ತರ ಪಂಜಾಬ್, ಉತ್ತರ ಹರಿಯಾಣ ಮತ್ತು ಉತ್ತರ ಉತ್ತರ ಪ್ರದೇಶದ ಪ್ರತ್ಯೇಕ ಪ್ರದೇಶಗಳ್ಲಲಿ ಡಿಸೆಂಬರ್ 13-15 ರ ಅವಧಿಯಲ್ಲಿ ದಟ್ಟವಾದ ಮಂಜು ತುಂಬಾ ಸಾಧ್ಯತೆ ಇದೆ. ಡಿಸೆಂಬರ್ 13 ಮತ್ತು 14 ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿಯೂ ಮಂಜು ಇರಲಿದೆ.
ಹಿಂದೂಸ್ತಾನ್ ಸಮಾಚಾರ್
