
ಬೆಂಗಳೂರು, 24 ಡಿಸೆಂಬರ್(ಹಿ.ಸ):
ಆ್ಯಂಕರ್ :
ಕರ್ನಾಕಟದಾದ್ಯಂತ ಕೊರೆಯುವ ಚಳಿ ಶುರುವಾಗಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆಗಳಿವೆ. ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕ ಹವಾಮಾನ ರಾಜ್ಯಾದ್ಯಂತ ಮೈಕೊರೆವ ಚಳಿ, ಅಲ್ಲಲ್ಲಿ ಮಳೆ ಸಾಧ್ಯತೆ ನಗರಗಳ ಹವಾಮಾನ ವರದಿ ಮಂಗಳೂರು: 32-23 ಶಿವಮೊಗ್ಗ: 30-17 ಬೆಳಗಾವಿ: 28-16 ಕೋಲಾರ: 26-16 ತುಮಕೂರು: 28-18 ಉಡುಪಿ: 32-23 ಕಾರವಾರ: 33-23 ಮಂಡ್ಯ: 30-19 ಮಡಿಕೇರಿ: 30-18 ರಾಮನಗರ: 29-19 ಚಿಕ್ಕಮಗಳೂರು: 26-16 ದಾವಣಗೆರೆ: 29-17 ಚಿತ್ರದುರ್ಗ: 27-16 ಹಾವೇರಿ: 30-18 ಬಳ್ಳಾರಿ: 29-18 ಹಾಸನ: 28-17 ಚಾಮರಾಜನಗರ: 31-19 ಚಿಕ್ಕಬಳ್ಳಾಪುರ: 27-17 ಯಾದಗಿರಿ: 30-17 ವಿಜಯಪುರ: 30-17 ಬೀದರ್: 29-15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
