
ಬೆಂಗಳೂರು, 24ಜನವರಿ(ಹಿ.ಸ):
ಆ್ಯಂಕರ್ :
ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದೆ, ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.
ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
