ಬೆಂಗಳೂರು, 16 ಜನವರಿ(ಹಿ.ಸ):
ಆ್ಯಂಕರ್ :
ಕರ್ನಾಟಕದ ಬಹುತೇಕ ಕಡೆ ಮಂಜು ಕವಿದ ವಾತಾವರಣವಿದ್ದು, ಚಳಿ ಕೂಡ ಕೊಂಚ ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಏರ್ಪೋರ್ಟ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್
