• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ವೇಳಾಪಟ್ಟಿ ಪ್ರಕಟ
Regional

ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ವೇಳಾಪಟ್ಟಿ ಪ್ರಕಟ

CliQ INDIA
Last updated: October 17, 2023 1:00 am
CliQ INDIA
Share
3 Min Read
SHARE

ಕೊಪ್ಪಳ, 16 ಅಕ್ಟೋಬರ್ (ಹಿ.ಸ):

ಆ್ಯಂಕರ್: ಭಾರತ ಚುನಾವಣಾ ಆಯೋಗದ ದಿನಾಂಕ: 09.08.2023 ರ ಪತ್ರದನ್ವಯ, ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಲಾಗುತ್ತಿರುವುದರಿಂದ, ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ-18 ರಲ್ಲಿ ಹೊಸದಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ ಎಂದು ನಿರ್ದೇಶನವಿರುತ್ತದೆ. ಪ್ರಾದೇಶಿಕ ಆಯುಕ್ತರು ಹಾಗೂ ಮತದಾನ ನೋಂದಣಾಧಿಕಾರಿಗಳು ಸಹ ಈ ನಿಟ್ಟಿನಲ್ಲಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಕಾರ್ಯಪ್ರವೃತ್ತರಾಗಲು ಸೂಚಿಸಿರುತ್ತಾರೆ.

ಭಾರತ ಚುನಾವಣಾ ಆಯೋಗದ ನಿಗಧಿತ ವೇಳಾಪಟ್ಟಿಯಂತೆ ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ, ಹೆಸರು ಸೇರ್ಪಡೆ ಮಾಡುವ ಬಗ್ಗೆ, ಭಾರತ ಚುನಾವಣಾ ಆಯೋಗವು, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ವಿಭಾಗದ ಎಲ್ಲಾ ಜಿಲ್ಲಾಧಿಕಾರಿಗಳನ್ನು, ಆಯುಕ್ತರು ಮಹಾನಗರ ಪಾಲಿಕೆ, ಕಲಬುರಗಿ ವಿಭಾಗದ ಆಯಾ ಉಪ ವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿರುತ್ತದೆ. ಅರ್ಹತಾ ದಿನಾಂಕ: 01-11-2023 ಕ್ಕೆ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯು ನೂತನವಾಗಿ ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿರುತ್ತದೆ.

ಈಶಾನ್ಯ ಪದವಿಧರರ ಮತ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಜಿ ನಮೂನೆ-18 ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 06(ಸೋಮವಾರ) ಕೊನೆಯ ದಿನವಾಗಿದೆ. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23 ರಂದು(ಗುರುವಾರ) ಪ್ರಕಟಿಸಲಾಗುವುದು. ನವೆಂಬರ್ 23 ರಿಂದ ಡಿಸೆಂಬರ್ 09 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಧಿ ನಿಗದಿಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30 ರಂದು ಪ್ರಕಟಿಸಲಾಗುವುದು.

ಕರ್ನಾಟಕ ಈಶಾನ್ಯ ಪದವೀಧರರ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಮಾರ್ಗಸೂಚಿಗಳನ್ನು ನಿಗದಿಪಡಿಸಲಾಗಿದ್ದು, ಅದರನ್ವಯ ಅರ್ಹತಾ ದಿನಾಂಕ: 01-11-2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ, ದಿನಾಂಕ: 01-11-2020 ಕ್ಕಿಂತಲೂ ಹಿಂದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ದಿನಾಂಕ: 01-11-2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು, ನಿಗಧಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ, ತಾವು ಉತ್ತೀರ್ಣವಾಗಿರುವ ಅಂಕಪಟ್ಟಿ, ಆಧಾರ ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ದೃಢೀಕರಿಸಿ, ಅಲ್ಲದೇ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ, ಅರ್ಜಿಯೊಂದಿಗೆ ದಿನಾಂಕ: 06-11-2023 ರ ಒಳಗಾಗಿ ಮತದಾರರ ನೊಂದಣಾಧಿಕಾರಿಗಳು/ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬಹುದು.

ಸೇವೆಯಲ್ಲಿರುವ ಸರ್ಕಾರಿ ನೌಕರರು, ತಮ್ಮ ಇಲಾಖಾ ಮುಖ್ಯಸ್ಥರ ಮೂಲಕ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನದಲ್ಲಿ ಬರುವ ಸರ್ಕಾರಿ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಆಯೋಗವು ನಿಗಧಿಪಡಿಸಿರುವ 3ನೇ ಅನುಸೂಚಿತ ನಮೂನೆಯಲ್ಲಿ ದೃಢೀಕರಣ ಪತ್ರವನ್ನು ನೀಡಿ, ತಮ್ಮ ಕಚೇರಿಯ ಎಲ್ಲಾ ಅರ್ಹ ಸಿಬ್ಬಂದಿಗಳ ಅರ್ಜಿಯನ್ನು ಒಟ್ಟಾಗಿ ಗೊತ್ತುಪಡಿಸಿದ ಅಧಿಕಾರಿಗಳಿಗೆ, ದಿನಾಂಕ: 06-11-2023 ರ ರೊಳಗಾಗಿ ನೀಡಬಹುದು. ವಕೀಲರು, ವೈದ್ಯರು, ಚಾರ್ಟರ್ಡ್ ಅಕೌಂಟೆಂಟರು ಹಾಗೂ ನೊಂದಾಯಿತ ಇಂಜಿನಿಯರ್ ಸಂಘದ ಸದಸ್ಯರು, ದೃಢೀಕರಿಸಿದ ಪಟ್ಟಿಯೊಡನೆ ಅರ್ಜಿಗಳನ್ನು ಗೊತ್ತುಪಡಿಸಿದ ಅಧಿಕಾರಿಗಳಿಗೆ ನೀಡಬಹುದು. ಪ್ರಮಾಣ ಪತ್ರದೊಡನೆ, ಅರ್ಜಿದಾರನು ತಾನು ಓದಿದ ಕಾಲೇಜಿನ ಪ್ರಾಂಶುಪಾಲರು ಅಥವಾ ಸಂಬಂಧಪಟ್ಟ ವಿಶ್ವವಿದ್ಯಾಲಯದ ರಿಜಿಸ್ಟ್ರಾರಗಳಿಂದ ಪ್ರಮಾಣ ಪತ್ರವನ್ನು ಪಡೆದು ಅರ್ಜಿಯನ್ನು ಸಲ್ಲಿಸಬಹುದು. ನಮೂನೆ-18 ಈಗಾಗಲೇ ಎಲ್ಲಾ ಗೊತ್ತುಪಡಿಸಿದ ಅಧಿಕಾರಿಗಳ ಕಛೇರಿಯಲ್ಲಿ ಲಭ್ಯವಿದ್ದು, ನಮೂನೆ-18 ನ್ನು ಅರ್ಹ ಮತದಾರರು ಉಚಿತವಾಗಿ ಪಡೆಯಬಹುದಾಗಿದೆ. ಅರ್ಹ ಪದವಿಧರರು, ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ಗುರುತಿನ ಚೀಟಿಯ ಎಪಿಕ್ ಸಂಖ್ಯೆಯ ಮಾಹಿತಿಯನ್ನು ಒದಗಿಸತಕ್ಕದ್ದು. ಅರ್ಹ ಪದವಿಧರರು ಮೂಲ ಪದವಿ ಪ್ರಮಾಣ ಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ದೃಢೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ, ಅವರಿಂದ ದೃಢೀಕರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು.

ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳಿಗೆ ಅರ್ಜಿಯನ್ನು ಸಲ್ಲಿಸಿದಲ್ಲಿ, ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಬಹುದು. ಒಂದು ವೇಳೆ ಅರ್ಜಿದಾರರು ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಬಹುದಾಗಿರುತ್ತದೆ. ಬಲ್ಕ (ಗುಚ್ಚಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಆಯೋಗವು ಮುಂಬರುವ ದಿನಗಳಲ್ಲಿ ಸದರಿ ನಮೂನೆ-18 ರ ಅರ್ಜಿಗಳನ್ನು ಇಆರ್ಎಮ್ಎಸ್ ತಂತ್ರಾಂಶದಲ್ಲಿ ಅಳವಡಿಸಲು ಉದ್ದೇಶಿಸಿರುತ್ತಾರೆ. ಅರ್ಹ ಪದವಿಧರರು ಹೆಚ್ಚಿನ ಆಸಕ್ತಿ ವಹಿಸಿ, ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡು, ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ, ಸಕ್ರಿಯವಾಗಿ ಪಾಲ್ಗೊಳಬೇಕೆಂದು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಕೊಪ್ಪಳ ತಿಳಿಸಿದ್ದಾರೆ.

You Might Also Like

ಶಾಸಕರ ವಿರುದ್ಧ ದೂರು ದಾಖಲು – Hindusthan Samachar Kannada
ಬೆಂಗಳೂರಿನಲ್ಲಿ ಡಿಕೆಶಿ ಎದುರು ಶಾಸಕ ಮುನಿರತ್ನ ರಂಪಾಟ
ಧರ್ಮಸ್ಥಳ ಕ್ಷೇತ್ರದ ಸತ್ಯ ದರ್ಶನವಾಗಿದೆ : ವೀರೇಂದ್ರ ಹೆಗ್ಗಡೆ
ನಾಡದೇವತೆ ಚಾಮುಂಡೇಶ್ವರಿ ಪೂಜೆಯನ್ನು ಭಾನು ಮುಶ್ತಾಕ್ ಮಾಡಬಾರದು
ಚಂದ್ರಗ್ರಹಣ ; ಬೆಂಗಳೂರಿನಲ್ಲಿ ದೇವಾಲಯಗಳ ಸಮಯ ಬದಲಾವಣೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಸಿದ್ದರಾಮಯ್ಯ
Next Article ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಲಾಭ ಒದಗಿಸಿ: ಜಿಲ್ಲಾಧಿಕಾರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?