
ಬೆಂಗಳೂರು,17 ಅಕ್ಟೋಬರ್ (ಹಿ.ಸ):
ಆ್ಯಂಕರ್ :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಲಾಗಿದ್ದ ಕರ್ನಾಟಕ ಸಂಭ್ರಮ – 50 ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಿಡುಗಡೆ ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಸಚಿವರಾದ ಹೆಚ್.ಕೆ.ಪಾಟೀಲ್, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯ ದರ್ಶಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ: ಎನ್.ಮಂಜುಳಾ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್
