
ಬೆಂಗಳೂರು , 28ನವೆಂಬರ್ (ಹಿ.ಸ):
ಆ್ಯಂಕರ್ :
ಕೇಂದ್ರ ಚುನಾವಣಾ ಆಯೋಗವು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ. ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರ ಮಾಡಿರುವ ಸಾಧನೆಗಳನ್ನು ಜಾಹೀರಾತು ನೀಡಿರುವುದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದ್ದು, ಚುನಾವಣಾ ಸಂದರ್ಭದಲ್ಲಿ ನೆರೆಯ ರಾಜ್ಯದಲ್ಲಿ ಜಾಹೀರಾತು ನೀಡುವುದು ಚುನಾವಣಾ ನಿಯಮಗಳ ಉಲ್ಲಂಘನೆಯಾಗುತ್ತದೆ ಎಂದು ಆಯೋಗ ಹೇಳಿದೆ. ಈ ಸಂಬಂಧ ಮಂಗಳವಾರ ಸಂಜೆ 5 ಗಂಟೆಯೊಳಗೆ ವಿವರಣೆ ನೀಡುವಂತೆ ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದೆ.
ಹಿಂದೂಸ್ತಾನ್ ಸಮಾಚಾರ್
