
ಕಲಬುರಗಿ, 27 ಡಿಸೆಂಬರ್(ಹಿ.ಸ):
ಆ್ಯಂಕರ್ :
: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಮಾರುತಿ ರಾವ್ ಡಿ ಮಾಲೆ (84) ಶಾಂತಿನಗರದ ತಮ್ಮ ಮನೆಯಲ್ಲಿ ನಿಧನರಾದರು.
ಮಾರುತಿ ರಾವ್ ಡಿ ಮಾಲೆ (84) ಇವರು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕರ್ನಾಟಕ ಪೀಪಲ್ಸ್ ಎಜ್ಯೂಕೇಶನ್ ಸೊಸೈಟಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇಂದು ಸ್ವಗ್ರಾಮ ಹಡಗಿಲ್ ಹಾರುತಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕಲಬುರಗಿ ತಾಲೂಕಿನ ಹಡಗಿಲ್ ಹಾರುತಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜಕಾರಣಿಗಳು ಸೇರಿದಂತೆ ಇತರೆ ಗಣ್ಯರು ಭಾಗಿಯಾಗುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್
