ಬೆಂಗಳೂರು, 18 ಡಿಸೆಂಬರ್(ಹಿ.ಸ):
ಆ್ಯಂಕರ್ :
ನಾಲ್ಕು ಎಸ್ಐಟಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ಹಿನ್ನೆಲೆ ಬಿಬಿಎಂಪಿ ಕಾಮಗಾರಿ ತನಿಖೆಗೆ ರಚಿಸಿದ್ದ ಎಸ್ಐಟಿ ತಂಡಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಎಸ್ ಐಟಿ ಬದಲು ನಾಗಮೋಹನದಾಸ್ ಕಮಿಟಿಯಿಂದ ಮಾತ್ರ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. 4 ಎಸ್ ಐಟಿ ತನಿಖಾ ತಂಡ ಸಂಗ್ರಹಿಸಿದ ಮಾಹಿತಿಯನ್ನು ನಾಗಮೋಹನದಾಸ್ ಆಯೋಗಕ್ಕೆ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಆಗಸ್ಟ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. 2019ರಿಂದ 2023ರವರೆಗಿನ ಬಿಬಿಎಂಪಿ ವ್ಯಾಪ್ತಿಯ ಯೋಜನೆ, ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾಗಿದ್ದ ಅಕ್ರಮದ ಬಗ್ಗೆ ತನಿಖೆಗೆ ವಿಶೇಷ ತನಿಖಾ ತಂಡವನ್ನು ಸರ್ಕಾರ ರಚಿಸಿತ್ತು. ಸದ್ಯ ಹೈಕೋರ್ಟ್ನಲ್ಲಿ ಹಿನ್ನಡೆ ಹಿನ್ನೆಲೆ ಎಸ್ ಐಟಿ ತಂಡ ಹಿಂಪಡೆದು ಆದೇಶ ಹೊರಡಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
