ಹಾವೇರಿ, 06 ನವೆಂಬರ್ (ಹಿ.ಸ):
ಆ್ಯಂಕರ್: ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 45 ಲಕ್ಷ ಕಾರ್ಮಿಕರು ಕಾರ್ಮಿಕ ಕಾರ್ಡ್ಗಳನ್ನು ಹೊಂದಿದ್ದಾರೆ. ಕಳೆದ ವರ್ಷದಲ್ಲಿ 39 ಲಕ್ಷ ಹೊಸ ಕಾರ್ಡ್ಗಳನ್ನು ವಿತರಿಸಲಾಗಿದೆ. ಈ ಪೈಕಿ ಶೇಕಡ 60ರಿಂದ 70ರಷ್ಟು ಕಾರ್ಡ್ಗಳು ನಕಲಿ ಕಾರ್ಡ್ಗಳಾಗಿವೆ. ಅಂತಹ ನಕಲಿ ಕಾರ್ಡ್ ತಡೆಯಲು ಹೊಸ ಆ್ಯಪ್ ಬಿಡುಗಡೆ ಮಾಡುತ್ತಿ ದ್ದೇವೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೂ ಒಟ್ಟು 2.93 ಲಕ್ಷ ಕಾರ್ಮಿಕರು ಕಾರ್ಡ್ಗಳನ್ನು ಹೊಂದಿದ್ದಾರೆ. ನಕಲಿ ಕಾರ್ಡ್ಗಳನ್ನು ತಡೆಗಟ್ಟಲು ಕಾರ್ಮಿಕ ಸಂಘಟನೆಯ ಪಾತ್ರ ಮಹತ್ವದ್ದಾಗಿದ್ದು, ಅವರು ಸಲಹೆ, ಸೂಚನೆ ಹಾಗೂ ಸಹಾಯದಿಂದ ಅವುಗಳನ್ನು ತಡೆಹಿಡಿಯಲು ಸಾಧ್ಯ. ಕಾರ್ಮಿಕ ಕಾರ್ಯನಿರ್ವಹಿಸುವ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಯು ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡಿ, ನೈಜ ಕಾರ್ಮಿಕರನ್ನು ಗುರುತಿಸಿ ಹೊಸ ಕಾರ್ಡ್ ವಿತರಿಸಲಿದ್ದಾರೆ ಎಂದರು.
ಹಿಂದೂಸ್ತಾನ್ ಸಮಾಚಾರ್ ಮಂಜುನಾಥ ಗುಡಿಸಾಗರ/ ಪಿವಿ
