ಬೆಂಗಳೂರು, 5 ನವೆಂಬರ್ (ಹಿ.ಸ):
ಆ್ಯಂಕರ್ :
ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಿಂದ ಬರೊಬ್ಬರಿ 2 ಸಾವಿರ ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ. ನವೆಂಬರ್ 12 ಮತ್ತು 14 ರಂದು ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಹಬ್ಬ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ ನ.10 ರಿಂದ 12 ರವರೆಗೆ ಬೆಂಗಳೂರಿನಿಂದ ಕೆಳಕಂಡ ಸ್ಥಳಗಳಿಗೆ 2 ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆಯನ್ನು ನಿಗಮ ಮಾಡಿದೆ. ಇದರ ಜೊತೆಗೆ ಅಂತರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ನ.14 ಹಾಗೂ 15 ರಂದು ವಿಶೇಷ ಬಸ್ಸುಗಳು ಕೂಡ ಸಂಚರಿಸಲಿವೆ ಎಂದು ಕೆಎಸ್ ಆರ್ ಟಿ ಸಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್
