ಬೆಂಗಳೂರು,24ಅಕ್ಟೋಬರ್ (ಹಿ.ಸ):
ಆ್ಯಂಕರ್ :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೆರೆ ಹಾಗೂ ಉದ್ಯಾನವನಗಳ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ನಾಗರಿಕರಿಗೆ ಅವಕಾಶ ಕಲ್ಪಿಸಿದ್ದು, ಆಸಕ್ತರು ‘ಕೆರೆ ಮಿತ್ರ’ ಹಾಗೂ ‘ಹಸಿರು ಮಿತ್ರ’ರಾಗಿ ನೋಂದಾಯಿಸಿಕೊಳ್ಳಬಹುದು. ಇತ್ತೀಚೆಗೆ ನಡೆದ ಬ್ರ್ಯಾಂಡ್ ಬೆಂಗಳೂರು ಸಮ್ಮೇಳನದಲ್ಲಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ನಾಗರಿಕರಿಗೆ ಕೆರೆ, ಉದ್ಯಾನವನಗಳ ನಿರ್ವಹಣೆ ನೀಡುವ ಬಗ್ಗೆ ಹೇಳಿದ್ದರು. ಅವರ ಯೋಜನೆಯಂತೆ ಪ್ರಥಮವಾಗಿ ಕೆರೆ ಮಿತ್ರ ಹಾಗೂ ಹಸಿರು ಮಿತ್ರ ಆರಂಭವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್
