



ಕೋಲಾರ, ೨೬ ನವೆಂಬರ್ (ಹಿ.ಸ):
ಆ್ಯಂಕರ್ : ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕೋಲಾರ ಜಿಲ್ಲೆಯಲ್ಲಿ ಮುಂದುವರೆದಿದೆ. ಕೋಲಾರ ಜಿಲ್ಲೆಯ ಕೆಂಬೋಡಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು. ಅಭಿಯಾನದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಎಲ್ಇಡಿ ಪರದೆಯ ಮೇಲೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಪ್ರದರ್ಶಿಸಲಾಯಿತು.
ಕೋಲಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಮಾತನಾಡಿ ಕೇಂದ್ರ ಸರ್ಕಾರ ಜನ ಸಾಮಾನ್ಯರ ಆರ್ಥಿಕ ಪ್ರಗತಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯಾರು ಯೋಜನೆಗಳಿಂದ ವಂಚಿತರಾಗಿದ್ದಾರೆ ಅವರಿಗೆ ಯೋಜನೆ ತಲುಪಿಸುವುದು ಹಾಗೂ ಮಾಹಿತಿ ನೀಡುವುದು ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕೃಷಿ, ತೋಟಗಾರಿಕೆ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ರೈತರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ವಿವಿಧ ಇಲಾಖೆಗಳು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದೆ. ಪಡಿತರ ಆಹಾರ ಯೋಜನೆ, ಎಂ.ಎನ್.ಆರ್.ಇ.ಜಿ, ಮಹಿಳೆಯರ ಅಭಿವೃದ್ಧಿಗಾಗಿ ಮಾತೃವಂದನ ಮುಂತಾದ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಗ್ರಾಹಕರಿಗಾಗಿ ಪ್ರಧಾನ ಮಂತ್ರಿಗಳ ವಿವಿಧ ವಿಮಾ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಕೃಷಿ ವಿಜ್ಞಾನ ಕೇಂದ್ರದ ಪ್ರೊ. ಚಿಕ್ಕಣ್ಣ ಮಾತನಾಡಿ ಸಿರಿಧಾನ್ಯಗಳನ್ನು ಬೆಳೆಯಲು ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಇದು ನಮ್ಮ ಸಂಪ್ರದಾಯಕ ಕೃಷಿ ಪದ್ಧತಿಯಾಗಿದ್ದು, ರೈತರು ಸಿರಿಧಾನ್ಯಗಳನ್ನು ಬೆಳೆಯುವಂತೆ ತಿಳಿಸಿದರು.
ಕೆಂಬೋಡಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ಮಂಜುಶ್ರೀ ಮಾತನಾಡಿ ಬ್ಯಾಂಕ್ ಆಶ್ರಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಅಭಿಯಾನ ನಡೆಯಿತು. ಅಭಿಯಾನದಲ್ಲಿ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ ನೀಡಲಾಯಿತು. ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊAಡರು ಎಂದು ತಿಳಿಸಿದರು.
ಕೇಂದ್ರ ಸರ್ಕಾರದ ಕೆಸಿಸಿ ಯೋಜನೆಯ ಫಲಾನುಭವಿ ಮಂಜುನಾಥ್ ಮಾತನಾಡಿ ಕೃಷಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಕೆಸಿಸಿ ಯೋಜನೆಯಲ್ಲಿ ಪ್ರಗತಿ ಗ್ರಾಮೀಣ ಬ್ಯಾಂಕ್ ಕಲ್ಪಿಸಿದೆ. ಇದರಿಂದ ನಾನು ಮತ್ತು ಕುಟುಂಬ ಆರ್ಥಿಕವಾಗಿ ಸಬಲರಾಗಿದ್ದೇವೆ ಎಂದು ತಮ್ಮ ಅನುಭವವನ್ನು ಹಂಚಿಕೊ0ಡರು.
ವಡಗೂರು ಗ್ರಾಮದ ರೈತ ಮಹಿಳೆ ಶಾರದಮ್ಮ ಮಾತನಾಡಿ ನನ್ನ ಮಗನ ವಿದ್ಯಾಭ್ಯಾಸಕ್ಕಾಗಿ ಬ್ಯಾಂಕ್ ಸಾಲ ನೀಡಿದೆ. ಬ್ಯಾಂಕ್ ನೆರವಿನಿಂದ ಮಗ ಎಂ.ಬಿ.ಎ. ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗದಲ್ಲಿದ್ದಾನೆ. ಮತ್ತೊಬ್ಬ ಮಗ ಬ್ಯಾಂಕಿನಿAದ ಆರ್ಥಿಕ ನೆರವು ಪಡೆದು ಬೇಕರಿ ನಡೆಸುತ್ತಿದ್ದಾನೆ ಎಂದು ತಿಳಿಸಿದರು.
ಕೆಂಬೋಡಿ ಗ್ರಾಮದ ನಾಗರತ್ನ ಮಾತನಾಡಿ ನಾನು ಸ್ವ-ಸಹಾಯ ಗುಂಪಿನ ಸದಸ್ಯಳಾಗಿದ್ದು, ಬ್ಯಾಂಕ್ ಆರ್ಥಿಕ ನೆರವು ಕಲ್ಪಿಸಿದೆ. ಬ್ಯಾಂಕ್ ಕಲ್ಪಿಸಿದ ಆರ್ಥಿಕ ನೆರವಿನಿಂದ ಹೈನುಗಾರಿಕೆ ಆರಂಭಿಸಿದ್ದು, ಅದರಿಂದ ಒಳ್ಳೆಯ ಆದಾಯ ಪ್ರತಿ ತಿಂಗಳು ಗಳಿಸುತ್ತಿರುವುದಾಗಿ ತಿಳಿಸಿದರು.
ನೆಹರು ಯುವ ಕೇಂದ್ರದ ಜಿಲ್ಲಾ ಕೋ-ಆರ್ಡಿನೇಟರ್ ಪ್ರವೀಣ್ ಮಾತನಾಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಲೀಡ್ ಬ್ಯಾಂಕ್ ಮ್ಯಾನೇಜರ್ ಸುಧೀರ್, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಚಿಕ್ಕಣ್ಣ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಕ ಕಛೇರಿಯ ವ್ಯವಸ್ಥಾಪಕ ಶ್ರೀನಿವಾಸ್ ಭಾಗಿಯಾಗಿದ್ದರು.
ಅಭಿಯಾನದ ಅಂಗವಾಗಿ ರೈತರ ಬೆಳೆಗಳಿಗೆ ಕೀಟ ನಾಶಕ ಸಿಂಪಡಣೆ ಡ್ರೋನ್ ಪ್ರಾತ್ಯಕ್ಷಿತೆ ನಡೆಯಿತು.
ಚಿತ್ರಗಳು :
೧) ಕೋಲಾರ ಜಿಲ್ಲೆಯ ಕೆಂಬೋಡಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಶ್ರಯದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಕೋಲಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಪ್ರೊ. ಡಾ.ಚಿಕ್ಕಣ್ಣ ಉದ್ಘಾಟಿಸಿದರು.
೨) ಅಭಿಯಾನದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಪಾಲ್ಗೊಂಡಿದ್ದರು.
೩) ಎಲ್ಇಡಿ ಪರದೆಯ ಮೇಲೆ ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪ್ರದರ್ಶಿಸಲಾಯಿತು.
೪) ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೆಂಬೋಡಿ ಶಾಖೆಯ ನಿವೃತ್ತ ಮ್ಯಾನೇಜರ್ ರವಿ ಹಾಗೂ ಇತರ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
೫) ರೈತರ ಬೆಳೆಗಳಿಗೆ ಡ್ರೋನ್ ಮೂಲಕ ಕೀಟ ನಾಟಕ ಸಿಂಪಡನೆಯ ಪ್ರಾತ್ಯಕ್ಷಿತೆ
