• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೊಪ್ಪಳ : ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ
Regional

ಕೊಪ್ಪಳ : ರಾಷ್ಟ್ರಕವಿ ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ

CliQ INDIA
Last updated: December 30, 2025 8:11 am
CliQ INDIA
Share
3 Min Read
SHARE
ಕೊಪ್ಪಳ : ರಾಷ್ಟ್ರಕವಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ, 29 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲಾಡಳಿತ ಕಛೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ನಂತರ ಮಾತನಾಡಿ, ಕುವೆಂಪುರವರ ಕವನಗಳು ಅರ್ಥಗರ್ಭಿತವಾಗಿದ್ದು, ಅವರ ದಿವ್ಯ ಸಂದೇಶಗಳು ನಮಗೆ ದಾರಿದೀಪವಾಗಿವೆ. ಅವರ ವಿಶ್ವಮಾನವ ಸಂದೇಶವನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಕೊಪ್ಪಳದ ಸಾಹಿತಿ, ಹಿರಿಯ ಲೇಖಕರು ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮುಜುಮ್‌ದಾರ್ ಅವರು ವಿಶೇಷ ಉಪನ್ಯಾಸ ನೀಡಿದರು

ಅವರು ಮಾತನಾಡಿ, ಕುವೆಂಪುರವರು ‘ಮನುಜ ಮತ ವಿಶ್ವಪಥ’ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವರಾಗಿದ್ದಾರೆ. ಕಥೆ, ಕವನ, ಕಾದಂಬರಿ, ವಿಮರ್ಶೆ ಮುಂತಾದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿಯೂ ಕುವೆಂಪುರವರು ಸಾಹಿತ್ಯ ರಚಿಸಿ, ಕನ್ನಡ ಅಗ್ರಮಾನ್ಯ, ರಾಷ್ಟ್ರಕವಿ ಎಂದೆನಿಸಿಕೊಂಡಿದ್ದಾರೆ.

ಅವರ ಸಾಹಿತ್ಯವನ್ನು ಅಧ್ಯಯನ ಮಾಡುವುದರ ಮೂಲಕ ಇಂದಿನ ಯುವ ಕವಿ, ಸಾಹಿತಿಗಳು ಕುವೆಂಪು ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು. ಕುವೆಂಪು ರವರ ‘ಭಾರತ ಜನನಿಯ ತನುಜಾತೆ’ ಎಂಬ ಹಾಡನ್ನು ನಮ್ಮ ರಾಜ್ಯದ ನಾಡಗೀತೆಯಾಗಿ ಅಳವಡಿಸಿಕೊಳ್ಳಲಾಗಿದ್ದು, ಈ ಹಾಡು ಇಡೀ ಭಾರತದ ಪರಿಕಲ್ಪನೆಯನ್ನು ಮುಂದಿಡುತ್ತದೆ ಎಂದು ಹೇಳಿದರು.

ಕುವೆಂಪು ಅವರನ್ನು ಬರೀ ಗದ್ಯ, ಸಾಹಿತ್ಯಕ್ಕಷ್ಟೇ ಲೇಖಕರೆಂದು ಅವರನ್ನು ಗುರುತಿಸಲು ಸಾಧ್ಯವಿಲ್ಲ. ಏಕೆಂದರೆ, ಅವರು ರಚಿಸಿದ ‘ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯ, ಆಧುನಿಕ ಕಾಲದ ಶ್ರೇಷ್ಠ ಕಾವ್ಯಗಳಲ್ಲೊಂದಾಗಿದೆ ಎಂದರು.

ಕುವೆಂಪು ರವರು ಶಿಶು ಸಾಹಿತ್ಯವನ್ನು ಬರೆದಿದ್ದು, ಮನುಷ್ಯನಿಗೆ ಅಲ್ಲಿಂದ ಮಾನವೀಯ ಸಂದೇಶಗಳನ್ನು ತಿಳಿಸಿದ್ದಾರೆ. ಮಗು ಹುಟ್ಟಿನಿಂದಲೇ ವಿಶ್ವಮಾನವಾಗಿರುತ್ತದೆ. ಆದರೆ, ಅದು ಬೆಳೆದಂತೆಲ್ಲ ಅಲ್ಪ ಮಾನವನಾಗುತ್ತದೆ. ಏಕೆಂದರೆ, ಹಲವಾರು ಕಟ್ಟುಪಾಡುಗಳು ಆ ಮಗುವಿನ ತೆಲೆಯಲ್ಲಿ ಬರುವಂತೆ ಸುತ್ತಮುತ್ತಲಿನ ವಾತಾವರಣ ಕಾರಣವಾಗುತ್ತದೆ. ಇದು ಆಗಬಾರದು ಮತ್ತು ಪ್ರತಿಯೊಂದು ಮಗು ಬೆಳೆಯುತ್ತಾ ಹೋದಂತೆ ಜಾತಿಗೆ ಸೀಮಿತವಾಗಬಾರದು. ವಿಶಾಲವಾದ ಹೃದಯದಿಂದ ಬೆಳೆಯಬೇಕು. ಮನುಷ್ಯನು ಮಾನವೀಯ ಮೌಲ್ಯಗಳನ್ನು ಹೊಂದಬೇಕೆಂಬ ದಿವ್ಯ ಸಂದೇಶಗಳನ್ನು ನೀಡಿದ ಕುವೆಂಪುರವರು ವಿಶ್ವಮಾನವ ಅನಿಸಿಕೊಂಡಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಮಾತನಾಡಿ, ಮಾನವ ಕುಲಕ್ಕೆ ಕುವೆಂಪುರವರು ನೀಡಿರುವ ಸಂದೇಶಗಳು ಸಾರ್ವಕಾಲಿಕವಾಗಿವೆ. ನಾವೆಲ್ಲರೂ ಮತ್ತೆ ಮತ್ತೆ ಜ್ಞಾಪಿಸಿಕೊಳ್ಳಬಹುದಾದ ಶ್ರೇಷ್ಠ ಸಾಹಿತಿಗಳಲ್ಲಿ ಕುವೆಂಪು ರವರು ಪ್ರಮುಖರಾಗಿದ್ದಾರೆ. ಕುವೆಂಪು ರವರು ವಿಶ್ವ ಮಾನವ ಮತ್ತು ಪ್ರಕೃತಿ ಸೌಂದರ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ‘ಮನುಜ ಮತ ವಿಶ್ವಪಥ’ ಹೀಗೆ ಹಲವಾರು ಮಾನವೀಯ ಸಂದೇಶ ಸಾರಿದ ಮಹಾನ್ ಚೇತನ ಕುವೆಂಪುರವರ ವಿಶ್ವಮಾನವ ಸಂದೇಶ ನಾವು ಅರಿತುಕೊಳ್ಳಬೇಕು ಎಂದರು.

ನಿವೃತ್ತ ಪ್ರಾಚಾರ್ಯರು ಹಾಗೂ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ್ ಅವರು ಮಾತನಾಡಿ, ಕುವೆಂಪುರವರು ಜಾತಿ, ಮತ, ಪಂಥ, ದೇಶ, ಭಾಷೆ ಎಲ್ಲವನ್ನೂ ಮೀರಿ ಮೊದಲು ನಾವು ಮಾನವರಾಗಬೇಕು, ವಿಶ್ವ ಮಾನವರಾಗಬೇಕೆಂಬ ಸಂದಶೇವನ್ನು ನೀಡಿದ್ದಾರೆ. ಅವರ ವಿಚಾರಗಳನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು. ಕುವೆಂಪು ರವರು ಹೇಳಿರುವ ಹಾಗೆ ನಾವೆಲ್ಲರೂ ವಿಶ್ವ ಮಾನವರಾಗಿ ಬಾಳಲು ಪ್ರಯತ್ನಿಸೋಣ ಎಂದು ಹೇಳಿದರು.

ಶ್ರೀ ಗುರುಕೃಪ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಕುವೆಂಪು ರವರು ಗೀತೆಗಳನ್ನು ಹಾಡಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಮತ್ತು ಸಾಹಿತಿಗಳು, ಲೇಖಕರು ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ದಕ್ಷಿಣ – ನೈಋತ್ಯ ವಲಯದ ಪ್ರಾದೇಶಿಕ ರಾಜಭಾಷಾ ಸಮ್ಮೇಳನ
ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲಾವಣೆ – Hindusthan Samachar Kannada
ಬಾಲಕಿಯರ ವಸತಿ ನಿಲಯಕ್ಕೆ ಸಚಿವ ನಾಗೇಂದ್ರ ದಿಢೀರ್ ಭೇಟಿ
ಕರಾವಳಿ ಕಾವಲಿಗೆ ವಿಶೇಷ ಪಡೆ ರಚನೆ:ಸಿದ್ದರಾಮಯ್ಯ | BulletsIn
ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕೌಂಡಿನ್ಯಾ ನೌಕಾಯಾನದ ಚೊಚ್ಚಲ ಪ್ರಯಾಣ ; ದೇಶದ ಶ್ರೀಮಂತ ಕಡಲ ಪರಂಪರೆಯ ಸಂಕೇತ : ಪ್ರಧಾನಿ ಮೋದಿ
Next Article ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?