ಬೆಂಗಳೂರು,27 ನವೆಂಬರ್ (ಹಿ.ಸ):
ಆ್ಯಂಕರ್ :
ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಜನತಾ ದರ್ಶನ ಶುರುವಾಗಲಿದ್ದು, ಇಡೀ ದಿನ ಸಿಎಂ ಜನರ ಸಮಸ್ಯೆ, ಸಂಕಷ್ಟಗಳಿಗೆ ಕಿವಿಗೊಟ್ಟು, ನಾಡಿನ ಪ್ರಜೆಗಳ ಅಹವಾಲು ಸ್ವೀಕರಿಸಲಿದ್ದಾರೆ. ಇನ್ನು ಸಹಸ್ರಾರು ಸಂಖ್ಯೆಯಲ್ಲಿ ಜನರ ತಮ್ಮ ಸಮಸ್ಯೆಗಳನ್ನ ಹೊತ್ತು ಬರುವ ಸಾಧ್ಯತೆ ಇದೆ. ಹೀಗಾಗಿ ಜನರ ಅನುಕೂಲಕ್ಕಾಗಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿದೆ.
ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಎರಡು ಪ್ರತ್ಯೇಕ ಕೌಂಟರ್ಗಳು ಇರಲಿವೆ. ಎಲ್ಲಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಆಯುಕ್ತರು ಖುದ್ದು ಹಾಜರಿರುವಂತೆ ಸೂಚಿಸಲಾಗಿದೆ. 300ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳದಲ್ಲಿ ಇರಲಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವ ಯತ್ನ ಮಾಡಲಿದ್ದಾರೆ. ಡಿಸಿಪಿ, ಮೂವರು ಎಸಿಪಿ, 19 ಇನ್ಸ್ಪೆಕ್ಟರ್ ಸೇರಿ 550ಕ್ಕೂ ಹೆಚ್ಚು ಪೊಲೀಸರನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
