• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಜನರ ನೋವಿಗೆ ಅಧಿಕಾರ ಶಾಹಿ ಮಿಡಿಯಬೇಕು : ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ
Regional

ಜನರ ನೋವಿಗೆ ಅಧಿಕಾರ ಶಾಹಿ ಮಿಡಿಯಬೇಕು : ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ

CliQ INDIA
Last updated: January 1, 2026 12:35 pm
CliQ INDIA
Share
3 Min Read
SHARE

ಕೋಲಾರ, 31 ಡಿಸೆಂಬರ್ (ಹಿ.ಸ) :

ಆ್ಯಂಕರ್ : ಆಡಳಿತ ವ್ಯವಸ್ಥೆಯಲ್ಲಿ ಶಿಕ್ಷಣ, ಎಂಪತಿ (ಸಂವೇದನಾಶೀಲತೆ) ಹಾಗೂ ಎನ್ಫೋರ್ಸ್ಮೆಂಟ್ (ಕಠಿಣ ಜಾರಿ) ಎಂಬ ಮೂರು ‘ಇ’ ಮಂತ್ರಗಳು ಅತ್ಯಗತ್ಯ. ಕೇವಲ ದಂಡನೆ ಅಥವಾ ಕಾನೂನು ಕ್ರಮದಿಂದ ಬದಲಾವಣೆ ಸಾಧ್ಯವಿಲ್ಲ, ಜನರ ನೋವಿಗೆ ಮಿಡಿಯುವ ಗುಣ ಅಧಿಕಾರಶಾಹಿಯಲ್ಲಿ ಬಂದಾಗ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯ, ಎಂದು ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಭಿಪ್ರಾಯಪಟ್ಟರು.

ಜಿಲ್ಲಾಧಿಕಾರಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ವರ್ಷದ ಕೊನೆಯ ದಿನವಾದ ಇಂದು ಕೋಲಾರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, ಮೀಟ್ ದಿ ಪ್ರೆಸ್ –ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಅಧಿಕಾರಿಗಳು ಸವಾಲು, ಸಮಸ್ಯೆಗಳನ್ನು ಮುಕ್ತವಾಗಿ ಸ್ವೀಕರಿಸಿ ಅದಕ್ಕೇ ಸೂಕ್ತ ಪರಿಹಾರ ಕಂಡುಕೊಳ್ಳಬೇಕು, ಇವರಲ್ಲಿ ವಿಶ್ವಾಸಾರ್ಹತೆ, ಸಮಗ್ರತೆ ಹಾಗೂ ಕೆಲಸದಲ್ಲಿ ಬದ್ದತೆ ಇರಬೇಕಿದೆ. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದರ ಜೊತೆಗೆ ಅವುಗಳನ್ನು ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೆ ತಲುಪುವಂತೆ ಮಾಡುವುದು ಸಹ ಬಹಳ ಮುಖ್ಯ. ನಾವು ನಮ್ಮ ಬಗ್ಗೆ ಯೋಚಿಸುವುದಕ್ಕಿಂತ ಇತರ ಕಷ್ಟಗಳಿಗೆ ಸ್ಪಂದಿಸಿ ಸಂವೇದನಾಶೀಲ ವ್ಯಕ್ತಿಗಳಾಗಬೇಕೆಂದು ಅಭಿಪ್ರಾಯಪಟ್ಟರು

ಜಿಲ್ಲೆಯಲ್ಲಿನ ಕಂದಾಯ ಸಮಸ್ಯೆಗಳ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ರೈತರ ಆಸ್ತಿ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಈವರೆಗೆ ಸುಮಾರು ೮,೯೨೩ ದರ್ಖಾಸ್ತು ಭೂಮಿಗಳ ಪಿ ಸಂಖ್ಯೆ ಸರಿಪಡಿಸುವ ಪ್ರಕ್ರಿಯೆ ನಡೆಯುತ್ತಿದ್ದು, ೧,೭೨೭ ಆರ್.ಟಿ.ಸಿಗಳನ್ನು ಈಗಾಗಲೇ ವಿತರಿಸಲಾಗಿದೆ. ವಾರಸುದಾರರ ಹೆಸರಿಗೆ ಖಾತೆ ಬದಲಾಯಿಸುವ ‘ಇ-ಪೌತಿ’ ಅಭಿಯಾನದಡಿ ೩೮,೦೦೦ ಅರ್ಹ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ, ಎಂದು ಮಾಹಿತಿ ನೀಡಿದರು. ಮಿಸ್ಸಿಂಗ್ ಫೈಲ್ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾ ಮಟ್ಟದ ಸಮಿತಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಕೋಲಾರವನ್ನು ‘ಕೆರೆಗಳ ನಾಡು’ ಎಂದು ಬಣ್ಣಿಸಿದ ಅವರು, ಜಿಲ್ಲೆಯ ೩,೨೩೨ ಕೆರೆಗಳ ಪೈಕಿ ಈಗಾಗಲೇ ೨,೯೩೨ ಕೆರೆಗಳ ಸರ್ವೇ ಪೂರ್ಣಗೊಂಡಿದೆ. ೧,೩೭೯ ಕೆರೆಗಳಲ್ಲಿನ ಒತ್ತುವರಿಯನ್ನು ಬಹುತೇಕ ತೆರವುಗೊಳಿಸಲಾಗಿದ್ದು, ಇನ್ನುಳಿದ ೫೦ ಕೆರೆಗಳಲ್ಲಿ ಬೆಳೆ ಅಥವಾ ಮಳೆಯ ಕಾರಣದಿಂದ ಪ್ರಕ್ರಿಯೆ ಬಾಕಿ ಇದೆ. ತೆರವುಗೊಳಿಸಿದ ಕೆರೆಗಳಿಗೆ ಶಾಶ್ವತವಾಗಿ ಫೆನ್ಸಿಂಗ್ ಅಥವಾ ಟ್ರೆಂಚ್ ನಿರ್ಮಿಸಲು ತಹಸೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಭೂಸುರಕ್ಷಾ ಯೋಜನೆಯಡಿ ಜಿಲ್ಲಾ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯ ಲಕ್ಷಾಂತರ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ದಾಖಲೆಗಳು ಆನ್‌ಲೈನ್‌ನಲ್ಲಿ ಸುಲಭವಾಗಿ ಲಭ್ಯವಾಗಲಿವೆ. ಇದಲ್ಲದೆ, ಮೂಲಸೌಕರ್ಯದಿಂದ ವಂಚಿತವಾದ ೧೪೫ ವಾಸಸ್ಥಳಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಅವರು ವಿವರಿಸಿದರು.

ನಗರ ಸ್ವಚ್ಛತೆ ಕೇವಲ ನಗರಸಭೆಯ ಕೆಲಸವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಕಸಮುಕ್ತ ನಗರ ನಿರ್ಮಾಣಕ್ಕೆ ಸಾರ್ವಜನಿಕರ ಭಾಗವಹಿಸುವಿಕೆ ಅತ್ಯಗತ್ಯ. ಅಧಿಕಾರಿಗಳಲ್ಲಿ ಸಂವೇದನಾಶೀಲತೆ ಕಡಿಮೆಯಾದಾಗ ಸಮಾಜವೇ ಅವರನ್ನು ಬದಲಿಸುವ ಶಕ್ತಿ ಹೊಂದಿದೆ ಎಂದು ಎಚ್ಚರಿಸಿದ ಅವರು ನಾನು ಮಾಡುವ ಕೆಲಸಕ್ಕೆ ಮೊದಲು ನನ್ನ ಆತ್ಮಸಾಕ್ಷಿಗೆ ಉತ್ತರಿಸಬೇಕಿದೆ. ಮಾಡಿದ ಕೆಲಸಗಳ ಬಗ್ಗೆ ಇತಿಹಾಸವೇ ಮಾತನಾಡಲಿ ಎಂಬುದು ನನ್ನ ಆಶಯ, ಎಂದು ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಎ.ಜಿ ಸುರೇಶ್ ಕುಮಾರ್, ಖಜಾಂಚಿ ಬಿ.ಎಲ್.ರಾಜೇಂದ್ರ ಸಿಂಹ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ವಿ. ಮುನಿರಾಜು, ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಬಿ.ವಿ.ಗೋಪಿನಾಥ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಡಾ. ಕೆ. ಎನ್. ಕವನ ಹಾಗೂ ವಿವಿಧ ಪತ್ರಕರ್ತರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಬುಧವಾರ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ಬಳ್ಳಾರಿ: `ಮಕ್ಕಳ ರಕ್ಷಣೆಗೆ ಕಾನೂನುಗಳು’ ಪುಸ್ತಕ ಬಿಡುಗಡೆ
ಗದಗ : ವಿಕಲಚೇತನ ಸೈನಾಜಾ ಹಾಗೂ ಕಳಸಪ್ಪ ಅವರಿಗೆ ಉದ್ಯೋಗ ಖಾತರಿ ನೆರವು | BulletsIn
ತಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿಜಯೇಂದ್ರ
ಲಕ್ಷ್ಮೇಶ್ವರ ಪಟ್ಟಣದಲ್ಲಿ ಹೃದಯಾಘಾತದಿಂದ ಮಹಿಳೆ ಸಾವು
ಜಿಲ್ಲೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಸೇವೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪ್ರಧಾನಿ ಮೋದಿ ಅವರಿಂದ 2026ರ ಹೊಸ ವರ್ಷದ ಶುಭಾಶಯ
Next Article ಐಎನ್‌ಎಸ್‌ವಿ ಕೌಂಡಿನ್ಯ ಸಿಬ್ಬಂದಿಗೆ ಪ್ರಧಾನಿ ಮೋದಿ ಹೊಸ ವರ್ಷದ ಶುಭಾಶಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?