• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಜಿಲ್ಲೆಯ ಎಪಿಎಂಸಿ ಗಳಲ್ಲಿ ಮೂಲಭೂತ ಸೌಲಭ್ಯ : ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
Regional

ಜಿಲ್ಲೆಯ ಎಪಿಎಂಸಿ ಗಳಲ್ಲಿ ಮೂಲಭೂತ ಸೌಲಭ್ಯ : ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

CliQ INDIA
Last updated: November 4, 2025 8:22 am
CliQ INDIA
Share
2 Min Read
SHARE
ಜಿಲ್ಲೆಯ ಎಪಿಎಂಸಿ ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ:  ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ

ಕೊಪ್ಪಳ, 003 ನವೆಂಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಗಳಲ್ಲಿ ಮೂಲಭೂತ ಸೌಕರ್ಯಗಳಾದ ಪಾರ್ಕಿಂಗ್ ವ್ಯವಸ್ಥೆ, ಲೈಟಿಂಗ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿದ್ದರೆ ಹಳ್ಳಿಯಿಂದ ಬರುವ ರೈತರಿಗೆ ತೊಂದರೆಯಾಗುತ್ತದೆ. ಇಲ್ಲಿಗೆ ಬರುವ ರೈತರಿಗೆ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ತಮ್ಮದು. ಕೃಷಿ ಮಾರುಕಟ್ಟೆ ಅಧಿಕಾರಿ ಮತ್ತು ಕಾರ್ಯದರ್ಶಿಗಳು ಏನು ಮಾಡುತ್ತಿದ್ದೀರಾ, ಜಿಲ್ಲೆಯ ಕೆಲವು ಕಡೆ ಸ್ವಚ್ಚತೆ ಇಲ್ಲ ಈ ಕುರಿತು ಅಧಿಕಾರಿಗಳು ಎಚ್ಚೆತ್ತು ಸರಿಯಾಗಿ ಕೆಲಸ ಮಾಡದಿದ್ದರೆ ಸಂಬ0ಧಿಸಿದವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.

ಎಲ್ಲಾ ಎಪಿಎಂಸಿ ಗಳಲ್ಲಿ ರೈತರಿಂದ ಯಾವುದೇ ರೀತಿಯ ಕಮೀಷನ್ ಪಡೆಯಬಾರದು ಎಂದು ದೊಡ್ಡದಾಗಿ ಪರ್ಮನೆಂಟ್ ಬೋರ್ಡ್ ಹಾಕಿಸಬೇಕು. ಬೆಳವಿನಾಳ ಎಪಿಎಂಸಿಯಲ್ಲಿ ಯಾವುದೇ ಸರಿಯಾದ ವ್ಯವಸ್ಥೆ ಇಲ್ಲ ಅಲ್ಲಿಗೆ ಮಾರಾಟಕ್ಕೆ ಬರುವ ರೈತರಿಗೆ ತೊಂದರೆಯಾಗುತ್ತದೆ. ಸರಿಯಾದ ರಸ್ತೆ ಸಹ ಇಲ್ಲ. ಅಲ್ಲಿ ಅಪ್ರೋಚ್ ರೋಡ್ ಮಾಡಬೇಕು ಮತ್ತು ಮಾರ್ಕೆಟ್ ಸಮಯ ಬೆಳಿಗ್ಗೆ 5:30 ರಿಂದ ಪ್ರಾರಂಭಿಸಬೇಕು. ಬರುವ ಮತ್ತೊಂದು ಸಭೆಯೊಳಗೆ ತಾವು ಮಾಡಿದ ಕೆಲಸದ ಕುರಿತು ಸಮಗ್ರ ಮಾಹಿತಿ ನೀಡಬೇಕೆಂದರು.

ಜಿಲ್ಲೆಯ ಎಪಿಎಂಸಿ ಗಳಲ್ಲಿ ಎಷ್ಟು ಸೈಟುಗಳಿವೆ, ಅವುಗಳಲ್ಲಿ ಎಷ್ಟು ಜನರು ನಿಯಮ ಉಲ್ಲಂಘನೆ ಮಾಡಿದ್ದಾರೆ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಏನು ಕ್ರಮ ತೆಗೆದುಕೊಂಡಿದ್ದೀರಾ, ತಾವು ಏನು ಕೆಲಸ ಮಾಡುತ್ತಿದ್ದೀರಾ, ಸರಿಯಾದ ರೀತಿಯಲ್ಲಿ ತೆರಿಗೆ ಸಂಗ್ರಹ ಮಾಡುತ್ತಿದ್ದೀರಾ, ಎಲ್ಲಾ ಕಡೆ ವೇಬ್ರಿಡ್ಜ್ ಇವೆಯಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು ಎಪಿಎಂಸಿ ಗಳಲ್ಲಿ ಎಷ್ಟು ರಿಜಿಸ್ಟರ್ಡ್ ಮತ್ತು ಅನ್‌ರಿಜಿಸ್ಟರ್ಡ್ ಹಮಾಲರು ಇದ್ದಾರೆ, ಅವರಿಗೆ ಕಾರ್ಮಿಕ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಕೊಡಿಸುವ ವ್ಯವಸ್ಥೆ ಮಾಡಬೇಕು. ಈ ಎಲ್ಲವುಗಳನ್ನು ಸರಿಯಾದ ರೀತಿಯಲ್ಲಿ ಮಾಡಬೇಕೆಂದು ಎಪಿಎಂಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಾನುವಾರುಗಳ ಮಾರುಕಟ್ಟೆಯ ಸಮಸ್ಯೆಗಳು ಎನಾದರೂ ಇವೆಯಾ ಎಂದು ಪಶು ಅಧಿಕಾರಿಗಳನ್ನು ಕೇಳಿದಾಗ, ಯಾವುದೇ ಸಮಸ್ಯೆಗಳಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ವೇಸ್ಟ್ ಮ್ಯಾನೇಜ್‌ಮೆಂಟ್ ಸರಿಯಾಗಿಲ್ಲ. ದಾವಣಗೆರೆ ಜಿಲ್ಲೆಯಲ್ಲಿ ಝೀರೋ ವೇಸ್ಟ್ ಮ್ಯಾನೇಜ್‌ಮೆಂಟ್ ಇದೆ ಅದು ನಮ್ಮ ಜಿಲ್ಲೆಯಲ್ಲಿಯೂ ಆಗಬೇಕು. ಬರುವ ಮುಂದಿನ ಸಭೆಯ ಒಳಗಡೆ ಇಂದಿನ ಸಭೆಯಲ್ಲಿ ತಿಳಿಸಿದ ಎಲ್ಲಾ ಕೆಲಸಗಳಾಗಬೇಕೆಂದು ಸೂಚನೆ ನೀಡಿದರು.

ಈ ಸಭೆಯಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ಎಲ್. ಸಿದ್ದೇಶ್ವರ, ಕೃಷಿ ಮಾರಾಟ ಇಲಾಖೆಯ ಅಧಿಕಾರಿ ವೀರಭದ್ರಯ್ಯ ಹಿರೇಮಠ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕೃಷಿ ಉತ್ಪನ್ನ ಮಾರುಕಟ್ಟೆ ಕೊಪ್ಪಳ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಹಿರೇಮಠ, ಲೀಡ್ ಬ್ಯಾಂಕ್ ಮ್ಯಾನೇಜರ್ ಮಾರುತಿ ಹಾಗೂ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಗದಗ : ವಿಕಲಚೇತನ ಸೈನಾಜಾ ಹಾಗೂ ಕಳಸಪ್ಪ ಅವರಿಗೆ ಉದ್ಯೋಗ ಖಾತರಿ ನೆರವು | BulletsIn
ಕಲಬುರಗಿ ರಂಗಾಯಣ : ತಂತ್ರಜ್ಞರು ಹಾಗೂ ಕಲಾವಿದರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ
ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ
ರಾಹುಲ್ ಗಾಂಧಿ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ
ಬುಧವಾರದ ಭವಿಷ್ಯ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನ 5 ರಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ
Next Article ಗಾಜಾದ ಆಡಳಿತ ಅಮೆರಿಕಾ ಕೈಗೆ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?