• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಜಿ.ಪಂ.ಸಿಇಓ ರಿಷಿ ಆನಂದ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ
Regional

ಜಿ.ಪಂ.ಸಿಇಓ ರಿಷಿ ಆನಂದ ನಿಡೋಣಿ ಗ್ರಾ.ಪಂ. ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

CliQ INDIA
Last updated: July 4, 2025 12:55 am
CliQ INDIA
Share
4 Min Read
SHARE

ವಿಜಯಪುರ, 03 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ರವರು ಜುಲೈ 2ರಂದು ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಮ್ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ಬೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದರು.

ಗ್ರಂಥಾಲಯಗಳಲ್ಲಿ ಬರುವ ವಿದ್ಯಾರ್ಥಿಗಳು ಹಾಗೂ ಓದುಗರಿಗೆ ಅನುಕೂಲವಾಗುವಂತೆ ಐಎಎಸ್, ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯಕವಾಗುವ ಪುಸ್ತಕಗಳನ್ನು ಖರೀದಿಸಿ ಇರಿಸಬೇಕು. ಗ್ರಂಥಾಲಯಕ್ಕೆ ಉತ್ತಮ ಗುಣಮಟ್ಟದ ಮತ್ತು ಆಕರ್ಷಕ ಪೇಂಟಿಂಗ್ ಮಾಡಿಸಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ಗ್ರಾಮದ ಮುಖ್ಯ ರಸ್ತೆಗೆ ಗ್ರಂಥಾಲಯದ ನಾಮಫಲಕವನ್ನು ಅಳವಡಿಸಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಅಂಗನವಾಡಿ ಮಕ್ಕಳಿಗೆ ಬೆಂಚ್ ವಿತರಣೆ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು, ನಿಡೋಣಿ ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುರ್ಚಿ ಮತ್ತು ಬೆಂಚ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಸಂವಾದ ನಡೆಸಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ವಿತರಣೆ, ಆಟ, ಪಾಠ ಯೋಗಕ್ಷೇಮ ಕುರಿತು ವಿಚಾರಿಸಿದರು.

ನಿಡೋಣಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಕೇಂದ್ರದಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ಮಕ್ಕಳಿಗೆ ವಿತರಣೆ ಮಾಡಿದ ಪೀಠೋಪಕರಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಂಗನವಾಡಿ ಕೇಂದ್ರದ ಸುತ್ತ – ಮುತ್ತಲಿನ ಪರಿಸರವನ್ನು ಸ್ವಚ್ಚತೆಯಿಂದ ಕಾಪಾಡಿಕೊಳ್ಳಬೇಕು. ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಿ, ರೋಗ – ರುಜಿನುಗಳು ಬರದ ಹಾಗೆ ಅಂಗನವಾಡಿಗಳ ಸುತ್ತ ಮುತ್ತ ಸ್ವಚ್ಚತೆ ಕಾಯ್ದುಕೊಂಡಲ್ಲಿ ಎಲ್ಲ ಮಕ್ಕಳು ಆರೋಗ್ಯವಂತರಾಗಿರುತ್ತಾರೆ. ಮಕ್ಕಳ ಕಲಿಕಾ ಸಾಮಥ್ರ್ಯ ಗುಣಮಟ್ಟ ಹೆಚ್ಛಳವಾಗುವಂತೆ ಕಲಿಕೆಗೆ ಆಧ್ಯತೆ ನೀಡಬೇಕು. ಅಡುಗೆ ಕೊಠಡಿಯಲ್ಲಿ ಪ್ರತಿನಿತ್ಯ ಶುಚಿತ್ವ ಕಾಪಾಡಬೇಕು. ಕಡ್ಡಾಯವಾಗಿ ಪ್ರತಿದಿನ ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ ನಿರ್ವಹಣೆ ಮಾಡಬೇಕು. ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಮಕ್ಕಳಿಗೆ ಸಮಯಾನುಸಾರ ಪೌಷ್ಠಿಕ ಆಹಾರ ವಿತರಣೆಗೆ ಕ್ರಮ ವಹಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ವೇಳೆ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಒಕ್ಕೂಟದ ಸದಸ್ಯರೊಂದಿಗೆ ಸಂಘದ ಉಳಿತಾಯ, ಸ್ವ-ಉದ್ಯೋಗ ಮತ್ತು ಸಾಲ ಸೌಲಭ್ಯದಿಂದ ಸಂಘಗಳಿಗೆ ಅನುಕೂಲವಾಗಿರುವ ಬಗ್ಗೆ ಹಾಗೂ ಮಹಿಳಾ ಸಬಲೀಕರಣ ಕುರಿತು ಚರ್ಚಿಸಿದರು.

ಅಧಿಕಾರಿಗಳೊಂದಿಗೆ ಸಭೆ : ತಾಲೂಕ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯತಿಯ ಸಾಮಾನ್ಯ ಮಾಹಿತಿ, ಸರ್ಕಾರಿ ಶಾಲೆಗಳು, ಕುಡಿಯುವ ನೀರಿನ ಮೂಲಗಳು, ಸರ್ಕಾರಿ ಆಸ್ಪತ್ರೆಗಳು ಹಾಗೂ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿ ಕುರಿತು ಏರ್ಪಡಿಸಿದ ಸಭೆಯಲ್ಲಿ ಮಾತನಾಡಿದ ಸಿಇಓರವರು ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ತುರ್ತಾಗಿ ದುರಸ್ತಿ ಮಾಡಿಸಬೇಕು. ಗ್ರಾಮಗಳಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ಇತರೆ ಮೂಲ ಸೌಕರ್ಯಗಳನ್ನು ಸಕಾಲದಲ್ಲಿ ಪೂರೈಸಬೇಕು. ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕಂಪೌಂಡ್, ಹೆಚ್ಚುವರಿ ಕೊಠಡಿಗಳಿಗೆ ಸಂಬಂಧಿಸಿದಂತೆ ದುರಸ್ತಿ ಕಾರ್ಯಗಳಿದ್ದಲ್ಲಿ ತಕ್ಷಣವೇ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಗೆ ಹೊಸ ಅಂಗನವಾಡಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಇರುವ ಜಾಗಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಕುಡಿಯುವ ನೀರಿನ ವ್ಯವಸ್ಥೆ ಕಾಂಪೌಂಡ್, ಶಾಲಾ ಕೊಠಡಿ ಸಮಸ್ಯೆಗಳಿದ್ದಲ್ಲಿ ಕೂಡಲೇ ಪರಿಹರಿಸಲು ಕ್ರಮ ವಹಿಸಬೇಕು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಲಭ್ಯವಿದ್ದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯಾನವನ ಅನುμÁ್ಠನ ಮಾಡಬೇಕು. ಗ್ರಾಮಗಳಲ್ಲಿ ನಿರಂತರ ಸ್ವಚ್ಛತೆಯನ್ನು ಕಾಪಾಡಬೇಕು. ನಿಯಮಿತವಾಗಿ ಫಾಗಿಂಗ್, ಬ್ಲೀಚಿಂಗ್ ಕಾರ್ಯಗಳನ್ನು ಕೈಗೊಳ್ಳಬೇಕು. ಈ ಮೂಲಕ ಸಾಂಕ್ರಾಮಿಕ ರೋಗಗಳಿಂದ ಮಕ್ಕಳು. ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರನ್ನು ರಕ್ಷಿಸಬಹುದು ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಹೇಳಿದರು.

ಬಳಿಕ ನಿಡೋಣಿ ಗ್ರಾಮದಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯವಾಗುವ ಪುಸ್ತಕಗಳನ್ನು ಹಾಗೂ ರ್ಯಾಕ್ ಗಳಲ್ಲಿ ವಿವಿಧ ಉತ್ತಮ ಪುಸ್ತಕಗಳನ್ನು ಇರಿಸಬೇಕು. ಓದುಗರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಮಟ್ಟ ಹೆಚ್ಚುವಂತಹ ವಿನೂತನ ಕಲಿಕಾ ಸಾಮಗ್ರಿಗಳನ್ನು ಇರಿಸಬೇಕು ಹಾಗೂ ಮೂಲ ಸೌಕರ್ಯಗಳನ್ನು ಪೂರೈಸಬೇಕು. ಗ್ರಂಥಾಲಯದ ಮೇಲ್ಛಾವಣಿ ಪತ್ರಾಸ್ ಇರುವುದನ್ನು ಗಮನಿಸಿದ ಸಿಇಓರವರು ಇದಕ್ಕೆ ಬದಲಾಗಿ ಪಿಓಪಿ ಮೇಲ್ಛಾವಣಿ ವ್ಯವಸ್ಥೆಗೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆರೋಗ್ಯ ಕ್ಷೇಮ ಕೇಂದ್ರಕ್ಕೆ ಭೇಟಿ: ಆರೋಗ್ಯ ಕ್ಷೇಮ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ಕೊಡುವ ರೋಗಿಗಳ ವಿವರಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದರು.

ಆಸ್ಪತ್ರೆಗೆ ಸಂಬಂಧಿಸಿದ ಎಲ್ಲಾ ಕಡತಗಳನ್ನು ಮತ್ತು ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ಆಸ್ಪತ್ರೆಯ ಸಿಬ್ಬಂದಿ ಹಾಜರಾತಿಯನ್ನು ಪರಿಶೀಲಿಸಿ, ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿ ಹಾಜರಾತಿಯನ್ನು ಪ್ರತಿನಿತ್ಯ ಕಡ್ಡಾಯವಾಗಿ ಪರಿಶೀಲಿಸಬೇಕು. ಅನಾರೋಗ್ಯದಿಂದ ಬರುವ ರೋಗಿಗಳ ಮತ್ತು ರೋಗಿಗಳ ಸಂಬಂಧಿಕರೊಡನೆ ಸಂಯಮದಿಂದ ವರ್ತಿಸಿ, ಅವರಿಗೆ ಪರಿಹಾರ ನೀಡಬೇಕು. ಆಸ್ಪತ್ರೆಯ ಸುತ್ತ-ಮುತ್ತಲೂ ಸ್ಥಳವನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು ಮತ್ತು ಆಸ್ಪತ್ರೆಯ ಒಳಾಂಗಣ ಆವರಣವನ್ನೂ ಸಹ ಪ್ರತಿನಿತ್ಯ ಸ್ವಚ್ಛಗೊಳಿಸಬೇಕು. ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಎಂದು ಅಲ್ಲಿನ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ, 15 ನೇ ಹಣಕಾಸಿನ ಯೋಜನೆ ಅಡಿ ಮತ್ತು ಗ್ರಾ.ಪಂ. ಅನುದಾನದಿಂದ ನೂತನವಾಗಿ ನಿರ್ಮಿಸಲಾಗಿರುವ ಜ್ಞಾನ ಮತ್ತು ಯೋಗ ಮಂದಿರ ಭೇಟಿ ನೀಡಿ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜೆ. ಎಸ್. ಪಠಾಣ, ಸಹಾಯಕ ನಿರ್ದೇಶಕರು (ಗ್ರಾ.ಉ) ವ್ಹಿ. ಎಸ್. ಹಿರೇಮಠ, ವೈದ್ಯಾಧಿಕಾರಿಗಳಾದ ಡಾ. ಶೀತಲ ಕಿನಗಿ, ತಾಲೂಕು ಯೋಜಾನಾಧಿಕಾರಿಗಳಾದ ಎಸ್ ಬಿ. ಪಾಟೀಲ, ನಿಡೋಣಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಬಿ. ಹೆಚ್. ಮುಜಾವರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಎಸ್. ಎಸ್. ಮ್ಯಾಗೇರಿ, ಗ್ರಾಮ ಪಂಚಾಯತಿಯ ಚುನಾಯಿತ ಸದಸ್ಯರು, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಯ ಸಿಬ್ಬಂದಿ, ಮಹಿಳಾ ಒಕ್ಕೂಟಗಳ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ರಾಯಚೂರು : ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ತಿಂಗಳೊಳಗೆ ದಾಖಲೆಯ 200 ಹೆರಿಗೆ
ಬೆಳಗಾವಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಟಾರ್ ಏರ್ ವಿಮಾನ
ಮಠಗಳಿಂದ ನಾಡು, ನುಡಿ ಸಂಸ್ಕೃತಿ ಉಳಿದಿದೆ- ಸಚಿವ ಎನ್ಎಸ್ ಬೋಸರಾಜು | BulletsIn
ಸಮುದ್ರದಲ್ಲಿ ವಾಯುಭಾರ ಕುಸಿತ, ಸಮುದ್ರಕ್ಕೆ ಇಳಿಯದಂತೆ ಸೂಚನೆ
ರಸ್ತೆ ಅಪಘಾತದಲ್ಲಿ ಯುವಕ ಸಾವು – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಚುನಾವಣಾ ಆಯೋಗ ಭೇಟಿ ಮಾಡಿದ ವೈಎಸ್ಆರ್ ಕಾಂಗ್ರೆಸ್ ನಿಯೋಗ
Next Article ಭಯೋತ್ಪಾದಕರ ಬಂಧನಕ್ಕೆ ಶೋಧ ಕಾರ್ಯಾಚರಣೆ ತೀವ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?