ಕೊಪ್ಪಳ, 16 ಜನವರಿ(ಹಿ.ಸ):
ಆ್ಯಂಕರ್ : ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ವತಿಯಿಂದ ಜನವರಿ 19 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ತಮ್ಮ ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ತಿಳಿಸಿದ್ದಾರೆ.
