ಬಳ್ಳಾರಿ,, 26 ಡಿಸೆಂಬರ್(ಹಿ.ಸ):
ಆ್ಯಂಕರ್: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳನ್ನು ಜನವರಿ 5, 6 ಮತ್ತು 7 ರಂದು ರಾಜ್ಯದ 20 ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.
ಪರೀಕ್ಷಾ ಪ್ರವೇಶ ಪತ್ರವನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದ್ದು ಡಿಸೆಂಬರ್ 22 ರ ನಂತರವೂ ಪ್ರವೇಶ ಪತ್ರ ತಲುಪದಿದ್ದಲ್ಲಿ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-26612991, 26623584, 26523867 ಹಾಗೂ ಮೊ.8618296186 ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ.ಪದ್ಮಿನಿ ನಾಗರಾಜು ಅವರು ತಿಳಿಸಿದ್ದಾರೆ.
