ಕೊಪ್ಪಳ, 29 ಡಿಸೆಂಬರ್(ಹಿ.ಸ):
ಆ್ಯಂಕರ್: ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ ಅವರು ಡಿಸೆಂಬರ್ 30 ರಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಮುಖ್ಯ ಮಂತ್ರಿಗಳೊಂದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟ್ರಿಪ್ಗೆ ಆಗಮಿಸುವರು.
ಬಳಿಕ ಅಲ್ಲಿಂದ 10.30ಕ್ಕೆ ನಿರ್ಗಮಿಸಿ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಿಂಧನೂರ ಹೆಲಿಪ್ಯಾಡ್ನಿಂದ ನಿರ್ಗಮಿಸಿ 3.35ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್ಸ್ಟ್ರಿಪ್ ಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅವರು ತಿಳಿಸಿದ್ದಾರೆ.
