• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಜನಜಾಗೃತಿ ಜಾಥಾ
Regional

ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಜನಜಾಗೃತಿ ಜಾಥಾ

CliQ INDIA
Last updated: November 22, 2025 2:15 am
CliQ INDIA
Share
2 Min Read
SHARE

ವಿಜಯಪುರ, 21 ನವೆಂಬರ್ (ಹಿ.ಸ.) :

ಆ್ಯಂಕರ್ : ವಿಶ್ವ ಮೂಲವ್ಯಾದಿ ದಿನದ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘ, ಭಾರತೀಯ ವೈದ್ಯಕೀಯ ಸಂಘ ಹಾಗೂ ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಜನಜಾಗೃತಿ ಜಾಥಾ ನಡೆಯಿತು.

ನಗರದ ಗಾಂಧಿ ಚೌಕಿನಿಂದ ಗಗನ ಮಹಲವರೆಗೆ ಆಯೋಜಿಸಿದ ವಾಕಾಥಾನ್ ದಲ್ಲಿ ಮೂಲವ್ಯಾಧಿ ರೋಗದ ಜನಜಾಗೃತಿಯ ಕುರಿತು ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಲಾಯಿತು.

ಗಗನ ಮಹಲ ಉದ್ಯಾನದಲ್ಲಿ ನಡೆದ ಜನಜಾಗೃತಿ ಶಿಬಿರದಲ್ಲಿ ಮಾತನಾಡಿದ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಕೋಟೆಣ್ಣವರ, ಮಲಬದ್ಧತೆ ಮೂಲವ್ಯಾಧಿ ರೋಗಕ್ಕೆ ಮುಖ್ಯ ಕಾರಣವಾಗಿದೆ. ಹೆಚ್ಚಿನ ನಾರಿನಂಶ ಮತ್ತು ನೀರಿನಂಶ ಅಧಿಕವಿರುವ ಹಣ್ಣು, ತರಕಾರಿ ಸೇವನೆಯಿಂದ ಮೂಲವ್ಯಾಧಿಯನ್ನು ದೂರವಿಡಬಹುದು. ನಿಯಮಿತ ಮಾಂಸಾಹಾರ ಸೇವನೆ ಒಳ್ಳೆಯದಲ್ಲ. ಪ್ರತಿನಿತ್ಯ ನಿಯಮಿತ ವ್ಯಾಯಾಮ, ಆರೋಗ್ಯಕರ ಜೀವನಶೈಲಿ ಪಾಲನೆ ಮತ್ತು ದುಶ್ಚಟಗಳಿಂದ ದೂರವಿರಬೇಕು ಎಂದು ಹೇಳಿದರು.

ಭಾರತೀಯ ದೊಡ್ಡ ಕರುಳು ಮತ್ತು ಗುದದ್ವಾರದ ಶಸ್ತ್ರ ಚಿಕಿತ್ಸಕರ ಸಂಘದ ಸಹಕಾರ್ಯದರ್ಶಿ ಡಾ. ಜಸ್ಪಾಲಸಿಂಗ್ ತೆಹಲಿಯಾ ಪ್ರಾಸ್ತಾವಿಕವಾಗಿ ಮಾತನಾಡಿ, ಜನಸಾಮಾನ್ಯರಲ್ಲಿ ಮೂಲವ್ಯಾದಿಯ ಬಗ್ಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಶೌಚಾಲಯದಲ್ಲಿ ಮಲವಿಲರ್ದನೆಗಾಗಿ 10-15 ನಿಮಿಷಕ್ಕಿಂತ ಹೆಚ್ಚು ಸಮಯ ವ್ಯಯಿಸಬಾರದು. ಭಾರತೀಯ ಶೈಲಿಯ ಶೌಚಾಲಯಗಳು ಮೂಲವ್ಯಾಧಿಯನ್ನು ತಡೆಯಲು ಉತ್ತಮವಾಗಿವೆ. ಮಲದಲ್ಲಿ ರಕ್ತ ಬೀಳುವುದು ಇದರ ಮುಖ್ಯ ಲಕ್ಷಣವಾಗಿದ್ದು, ಸೀಳು ಮೂಲವ್ಯಾಧಿ ಮತ್ತು ಗುದದ್ವಾರದ ಕ್ಯಾನ್ಸರ್ ಸಹ ಆಗಿರಬಹುದು. ಆದ್ದರಿಂದ ಯಾವುದೇ ನಾಚಿಕೆ, ಸಂಕೋಚಪಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಅಧೀಕ್ಷಕ ಡಾ. ಜಿಲಾನಿ ಅವಟಿ ಮಾತನಾಡಿ, ವಿಶ್ವ ಮೂಲವ್ಯಾಧಿ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ, ಅಲ್- ಅಮೀನ್ ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಜನರು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಗಿರೀಶ ಕುಲ್ಲೊಳ್ಳಿ ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಸಾಜಿದ ಮುಧೋಳ, ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಅಧ್ಯಕ್ಷ ಡಾ. ಅಶೋಕ ಜಾಧವ, ಕಾರ್ಯದರ್ಶಿ ಡಾ. ರಮಾಕಾಂತ.ಬಳೂರಕರ, ಡಾ. ಎಂ. ಬಿ. ಪಾಟೀಲ, ಡಾ. ವಿಕ್ರಂ.ಸಿಂದಗಿಕರ, ಡಾ. ಶೈಲೇಶ ಕನ್ನೂರ, ಡಾ. ವಿಜಯ ಪಾಟೀಲ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಕಿರಿಯ ವೈದ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಅಧ್ಯಕ್ಷ ಹತ್ಯೆ
ನಾಳೆ ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ
ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಭಕ್ತ ಕನಕದಾಸ ಜಯಂತಿ ಆಚರಣೆ
ಮಹದಾಯಿ ಯೋಜನೆಗೆ ಕೇಂದ್ರ ಇಚ್ಚಾಶಕ್ತಿ ತೋರಲಿ:ಸಿದ್ದು ತೇಜಿ | BulletsIn
ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶದ ಸಮಾರೋಪ ಸಮಾರಂಭ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಪಶ್ಚಿಮ ಬಂಗಾಳ–ಈಶಾನ್ಯದಲ್ಲಿ ಪ್ರಬಲ ಭೂಕಂಪ – Hindusthan Samachar Kannada
Next Article ಜಲಾವೃತ ಮತ್ತು ಕಾಡುಪ್ರಾಣಿಗಳಿಂದ ಬೆಳೆ ಹಾನಿಗೆ ಫಸಲ್‌ ಬಿಮಾ ರಕ್ಷಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?