ಬೆಂಗಳೂರು, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ಗೃಹ ಸಚಿವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸದನದಲ್ಲಿ ಸ್ಪಷ್ಟ ಉತ್ತರ ನೀಡಬೇಕೆಂದು ಒತ್ತಾಯಿಸಿದರು.
ಸಾಮಾಜಿಕ ಮಾಧ್ಯಮಗಳಲ್ಲಿ ಅನಾಮಿಕ ವ್ಯಕ್ತಿಗಳು ಸುಳ್ಳು ಕಥೆಗಳನ್ನು ಸೃಷ್ಟಿಸಿ ಹರಡುತ್ತಿದ್ದಾರೆ. ಆ ವ್ಯಕ್ತಿಯ ಮೇಲೆ ಮಾತ್ರವಲ್ಲ, ಆತನ ಹಿಂದಿರುವ ದುಷ್ಟ ವ್ಯಕ್ತಿಗಳ ಮೇಲೂ ತನಿಖೆ ನಡೆಯಬೇಕು. ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರಣವಿಲ್ಲದೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುತ್ತದೆ, ಹಾಗಾದರೆ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು,” ಎಂದು ಅಶ್ವಥ್ ನಾರಾಯಣ್ ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
