ಧಾರವಾಡ, 6 ಜನವರಿ(ಹಿ.ಸ):
ಆ್ಯಂಕರ್ :
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲು ದೇಶಾದ್ಯಂತ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಯಶಸ್ವಿಯಾಗಿ ಮುಂದುವರಿದಿದೆ. ಈ ಯಾತ್ರೆಯ ಮೂಲಕ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಮತ್ತು ಯೋಜನೆಗಳ ಲಾಭ ಪಡೆದ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಗಳು ನಡೆಯುತ್ತಿವೆ. ಸರ್ಕಾರದ ಯೋಜನೆಗಳ ಲಾಭ ಪಡೆಯದ, ಆರ್ಥಿಕವಾಗಿ ಹಿಂದುಳಿದ ಜನರಿಗೆ ತಲುಪುವಂತೆ ಸ್ಥಳದಲ್ಲೇ ಯೋಜನೆಗಳ ಮಾಹಿತಿ ಪಡೆದು, ಅರ್ಜಿಯನ್ನು ಸಲ್ಲಿಸಬಹುದಾದ ವ್ಯವಸ್ಥೆಯನ್ನು ಈ ಯಾತ್ರೆಯಲ್ಲಿ ಕಲ್ಪಿಸಲಾಗಿದೆ. ಕರ್ನಾಟಕ ರಾಜ್ಯದ ಧಾರವಾಡ ಜಿಲ್ಲೆಯಲ್ಲಿಂದು ಮಧ್ಯಾಹ್ನ ೩:೩೦ಕ್ಕೆ ಭಾರತ ಸಂಕಲ್ಪ ಯಾತ್ರೆಯ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ಕಾರ್ಯಕ್ರಮದಲ್ಲಿ ಭಾಗವವಹಿಸಿ, ಸ್ಥಳೀಯವಾಗಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸುವರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಮಳಿಗೆ ತೆರೆದು ಅಧಿಕಾರಿಗಳು ಯೋಜನೆಗಳ ಮಾಹಿತಿ ನೀಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
