ಕೊಪ್ಪಳ, 25 ನವೆಂಬರ್ (ಹಿ.ಸ):
ಆ್ಯಂಕರ್ : ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ಅದರಂತೆ ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಹಾಗೂ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ವೇಳೆ ತಪ್ಪದೇ ಹಾಜರಿರಲು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ತಿಳಿಸಿದ್ದಾರೆ.
