ಬೆಂಗಳೂರು, 28 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ ಕಡೆಗಣನೆ ವಿರುದ್ಧ ಸಿಡಿದೆದ್ದ ಕರವೇ ಸಂಘಟನೆ ಇಂಗ್ಲಿಷ್ ಬೋರ್ಡ್ ಹರಿದು ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆ ಅತಿರೇಕಕ್ಕೆ ತಿರುಗಿ ಕಲ್ಲು ತೂರಟ ಕೂಡ ನಡೆದಿತ್ತು. ಕಾನೂನು ಕೈ ಗೆ ತೆದುಕೊಂಡ ಕರವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಸದ್ಯ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಫಲಕದಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಕರವೇ ನಡೆಸಿದ ಪ್ರತಿಭಟನೆ ವೇಳೆ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಒಪ್ಪಿಸಿದ್ದು ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ ಜೆಎಂಎಫ್ ಸಿ ಕೋರ್ಟ್ ಜಡ್ಜ್ ಕರವೇ ಕಾರ್ಯಕರ್ತರಿಗೆ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಸದ್ಯ ನ್ಯಾಯಾಂಗ ಬಂಧನ ಹಿನ್ನೆಲೆ ಬಂಧಿತ ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.
ಕರವೇ ಕಾರ್ಯಕರ್ತ ಸೂರಿ ಆರೋಗ್ಯದಲ್ಲಿ ಏರುಪೇರು
ಇನ್ನು ಮತ್ತೊಂದೆಡೆ ಬಂಧಿತ ಕರವೇ ಕಾರ್ಯಕರ್ತ ಸೂರಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಪೊಲೀಸರ ವಶದಲ್ಲಿದ್ದ ವೇಳೆ ಸೂರಿ ಬಸ್ನಲ್ಲಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
