
ಬೆಂಗಳೂರು, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ನಾಳೆ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಉದ್ಯೋಗಾಕಾಂಕ್ಷಿ ಪದವಿಧರರಿಗೆ, ನಿರುದ್ಯೋಗ ಭತ್ಯೆ ನೀಡುವ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ, ಯುವ ನಿಧಿ ಯೋಜನೆಯಡಿ ನೋಂದಾಯಿಸಲು ಸೇವಾ ಸಿಂಧು ಪೋರ್ಟಲ್, ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ೨೦೨೩ರಲ್ಲಿ ತೇರ್ಗಡೆಯಾದ ದಿನಾಂಕದಿಂದ ೧೮೦ ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರರು ಮತ್ತು ಡಿಪ್ಲೊಮಾ ಹೊಂದಿದವರಿಗೆ, ಕರ್ನಾಟಕ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಸರ್ಕಾರ ನೀಡಲಿದೆ.
ಹಿಂದೂಸ್ತಾನ್ ಸಮಾಚಾರ್
