ವಿಜಯಪುರ, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : .ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ದಿ. 9 ಶನಿವಾರ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆ.10ಗಂ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆಗಾಲ ಸಂಬಂಧಿತ ಮುಂಜಾಗ್ರತಾ ಕ್ರಮಗಳು ಹಾಗೂ ಮಳೆ, ಪ್ರವಾಹ ಹಾನಿ ಮತ್ತಿತರ ವಿಷಯಗಳ ಕುರಿತು ಪ್ರಮುಖ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮ.12 ಗಂ. ಮಮದಾಪುರದಲ್ಲಿ ಅಂದಾಜು ರೂ.120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ಶಾಖಾ ಕಚೇರಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಲಿದ್ದಾರೆ. ಮ. 12.30ಗಂ. ಮಮದಾಪುರದ ಶ್ರೀ ಖಾಜಾ ಬಾಪುಸಾಹೇಬ ಅವರ ಮೂರ್ತಿ ಅನಾವರಣಗೊಳಿಸಲಿದ್ದಾರೆ.
ಮ.1.30ಗಂ. ಕಾಖಂಡಕಿಯಲ್ಲಿ ದುರ್ಗಾದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣ ಭೂಮಿಪೂಜೆ ಸಲ್ಲಿಸಲಿದ್ದಾರೆ ನಂತರ ಮ.2.00ಗಂ. ಕಾಖಂಡಕಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ಕಾಖಂಡಕಿಯಿಂದ ಹೊರಟು ಬೆಳಗಾವಿ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande
