ಬಳ್ಳಾರಿ, 8 ಡಿಸೆಂಬರ್(ಹಿ.ಸ):
ಆ್ಯಂಕರ್ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಜಿಲ್ಲಾ ಪ್ರಾದೇಶಿಕ ಕಚೇರಿಯ ಉದ್ಯೋಗಿಗಳ ಭವಿಷ್ಯನಿಧಿ ಮತ್ತು ಪಿಂಚಣಿ ಇತ್ಯಾದಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸಲು ಡಿಸೆಂಬರ್ 27ರಂದು ಬೆಳಿಗ್ಗೆ 9ರಿಂದ ಸಂಜೆ 6 ರವರೆಗೆ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮವನ್ನು ತೋರಣಗಲ್ಲಿನ ಐ ಟಿ ಎಂ ಎಸ್ ಲರ್ನಿಂಗ್ ಸೆಂಟರ್ನಲ್ಲಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯಕ್ಕೆ ಅರಿವು ಮೂಡಿಸುವ ಕಾರ್ಯಕ್ರಮವಾಗಿದೆ.
ಉದ್ಯೋಗದಾತರ ಕರ್ತವ್ಯಗಳು, ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು ಹಾಗೂ ಸುಧಾರಣೆಗಳ ಮಾಹಿತಿ ಒದಗಿಸುವುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ:08392-226304 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ಅವರು ತಿಳಿಸಿದ್ದಾರೆ.
