ಬೆಂಗಳೂರು , 12ನವೆಂಬರ್ (ಹಿ.ಸ):
ಆ್ಯಂಕರ್ :
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ‘ ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿದೆ. ನ.15 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಪದಗ್ರಹಣ ಮಾತ್ರ ನಿಗದಿ ಮಾಡಲಾಗಿದ್ದು, ನಂತರ ಅರಮನೆ ಮೈದಾನದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಹೌದು, ಅಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ನ.23ರ ನಂತರ ನಡೆಸಲು ನಿರ್ಧಾರಿಸಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಕರೆದು ದೊಡ್ಡ ಸಮಾವೇಶ ನಡೆಸಲು ಚಿಂತನೆ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್
