
ಬಳ್ಳಾರಿ, 21 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗೌರಿ ಗಣೇಶ ಹಬ್ಬವು ಭಕ್ತಿ ಭಾವನೆ ಪೂಜೆಯ ಹಬ್ಬವಾಗಿದ್ದು, ಪರಿಸರಕ್ಕೆ ಹಾನಿಯಾಗದಂತೆ ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಟಿ.ಎಂ. ಸಿದ್ದೇಶ್ವರ ಬಾಬು ಅವರು ತಿಳಿಸಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಸ್ಥೆ ಬಳ್ಳಾರಿ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ನಡೆದ ‘ಪರಿಸರ ಸ್ನೇಹಿ ಗಣೇಶ’ನನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧೀಕ್ಷಕ ಅಲ್ತಾಫ್ ಹುಸೇನ್, ಕ್ಷೇತ್ರ ಸಹಾಯಕ ಕೆ. ಸೋಮಶೇಖರ್ ಅವರು ಮಾತನಾಡಿದರು. ಬಳ್ಳಾರಿ ಜಿಲ್ಲಾ ಸಂಸ್ಥೆಯ ಜಿಲ್ಲಾ ಸ್ಕೌಟ್ ಆಯುಕ್ತ ಡಾ.ಕುಪ್ಪಗಲ್ ವೀರೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಮಲ್ಲೇಶ್ವರಿ ಜುಜಾರೆ, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಮಹಮ್ಮದ್ ಶರ್ಪುದ್ದೀನ್, ಜಿಲ್ಲಾ ತರಬೇತಿ ಆಯುಕ್ತ ಎಂ. ನಾಗರಾಜ್, ಜಂಟಿ ಕಾರ್ಯದರ್ಶಿ ಚಂದ್ರಯ್ಯ ಮಠದ, ಜಿಲ್ಲಾ ಸ್ಥಾನಿಕ ಆಯುಕ್ತ ಅನಂತ್ ಕುಮಾರ್ ಶೆಟ್ಟಿ, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್ ವರಲಕ್ಷ್ಮಿ, ರಾಜಲಕ್ಷ್ಮಿ, ರೋವರ್ ಸ್ಕೌಟ್ ಲೀಡರ್ ಗಂಟೆಪ್ಪ ಸೇರಿದಂತೆ ರೋವರ್ಸ್, ರೇಂಜರ್ಸ್, ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
