
ಕೊಪ್ಪಳ, 05 ಜುಲೈ (ಹಿ.ಸ.) :
ಆ್ಯಂಕರ್ : ಪರಿಸರವು ಪ್ರತಿಯೊಂದು ಜೀವಿಯ ಅವಶ್ಯಕತೆಯನ್ನು ಪೂರೈಸುತ್ತದೆ ಇಂತಹ ಪರಿಸರವನ್ನು ಸಂರಕ್ಷಿಸುವುದು ಮುಂದಿನ ಪೀಳಿಗೆಗೆ ಕಾಣಿಕೆಯಾಗಿ ಕೊಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಅವರು ಹೇಳಿದ್ದಾರೆ.
ನಗರದ ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಉಪ ಪ್ರಾದೇಶಿಕ ವಿಜ್ಞಾನಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಪ್ಪಳ ಪರಿಸರ ಅಧಿಕಾರಿಗಳಾದ ಹರಿಶಂಕರಅವರು ಭಾಗವಹಿಸಿದ್ದರು. ಮಹಾವಿದ್ಯಾಲಯದ ಪ್ರಾಚಾರ್ಯರಾದಡಾ. ಚನ್ನಬಸವ ಅವರುಕಾರ್ಯಕ್ರಮದಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರಾದ ಡಾ. ಸುಂದರ ಎಸ್. ಮೇಟಿ ಅವರು ಭಾಗವಹಿಸಿದ ಎಲ್ಲರಿಗೂ ಪರಿಸರ ದಿನಾಚರಣೆ ಕುರಿತ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಡಾ. ಮಂಜುನಾಥ ಬಡಿಗೇರ ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಕೊಪ್ಪಳ ವಿಜ್ಞಾನ ಉಪ ಕೇಂದ್ರದ ನಿರ್ದೇಶಕರು, ಕೊಪ್ಪಳ ಜಿಲ್ಲಾ ಮಾಲಿನ್ಯ ನಿಯಂತ್ರಣ ಕಛೇರಿಯ ಸಿಬ್ಬಂದಿ, ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್
