ವಿಜಯಪುರ, 28 ಡಿಸೆಂಬರ್ (ಹಿ.ಸ.) :
ಆ್ಯಂಕರ್ : ಚಳಿ ಹೆಚ್ಚಾದಂತೆ ವಿಜಯಪುರದಲ್ಲಿ ಕಳ್ಳರ ಹಾವಳಿಯೂ ಹೆಚ್ಚಾಗಿದೆ. ಕಳ್ಳರ ಹಾವಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಅನೌನ್ಸಮೆಂಟ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.
ಮೈಕ್ ಮೂಲಕ ಜನರು ಎಚ್ಚರಿಕೆಯಿಂದ ಇರುವಂತೆಯೂ, ಮನೆಯಲ್ಲಿ ಚಿನ್ನಾಭರಣ, ನಗದು ಇಡದೆ ಬ್ಯಾಂಕ್‌ಗಳಲ್ಲಿ ಇಡುವಂತೆ ಮನವಿ ಮಾಡ್ತಿದ್ದಾರೆ.
ಗ್ರಾಮಗಳಲ್ಲಿ, ಬಡಾವಣೆ, ಓಣಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡು ಬಂದಲ್ಲಿ 112 ಅಥವಾ ಹತ್ತಿರ ಠಾಣೆಯ ಪೊಲೀಸರ ಗಮನಕ್ಕೆ ತರುವಂತೆ ಪೊಲೀಸರು ಮನವಿ ಮಾಡ್ತಿದ್ದಾರೆ.
ನೆರೆಯ ಮಹಾರಾಷ್ಟ್ರ ಮೂಲಕ ಕಳ್ಳರು ರಾತ್ರಿ ವೇಳೆ ಮುಸುಕು ಧರಿಸಿ ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮರಾ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ತಮ್ಮ ಬೀಟ್ ಪೊಲೀಸ್ ರ ಮೂಲಕ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಜನರನ್ನ ಎಚ್ಚರದಿಂದ ಇರುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande
