ಬಳ್ಳಾರಿ,18 ಡಿಸೆಂಬರ್(ಹಿ.ಸ):
ಆ್ಯಂಕರ್ : ನಗರದ ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘ ಬಳ್ಳಾರಿ ಜಿಲ್ಲಾ ಅಲೆಮಾರಿ ಮತ್ತು ಅರೆ ಅಲೆಮಾರಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ರಾಜ್ಯ ಗೌರವಾಧ್ಯಕ್ಷ ಹಾಗೂ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಯವರು ನೇತೃತ್ವದಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷರು ವಕೀಲರು ಆದ ವೆಂಕಟೇಶ ಯಾದವ್, ಒಕ್ಕೂಟದ ರಾಜ್ಯ ಪ್ರಧಾನ ಸಂಚಾಲಕ ಎಂ ಪ್ರಕಾಶ್, ರಾಜ್ಯ ಜಂಟಿ ಕಾರ್ಯದರ್ಶಿ ರಾಜೇಶ್ವರಿ ಬೈಲ್ ಪತ್ತಾರ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು .
ಬಳ್ಳಾರಿ ಜಿಲ್ಲಾ ಗೌರವಾಧ್ಯಕ್ಷರಾಗಿ ಪಿ.ತಿಮ್ಮಪ್ಪಯಾದವ್, ಅಧ್ಯಕ್ಷರಾಗಿ ಬಿ ಬಸರೆಡ್ಡಿ, ಕಾರ್ಯ ಅಧ್ಯಕ್ಷರಾಗಿ ಗಿರಿ ಯಾದವ್, ಉಪಾಧ್ಯಕ್ಷರಾಗಿ ಎರ್ರಿಸ್ವಾಮಿ ಜೋಗಿ, ಹನುಮಂತಪ್ಪ,, ರೇಣುಕಮ್ಮ, ಜಂಟಿ ಕಾರ್ಯದರ್ಶಿಯಾಗಿ ಆನಂದ್ ಯಾದವ್, ಪರಶುರಾಮ್, ಸಂಘಟನಾ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ ಯಾದವ್, ಜಿಲ್ಲಾ ಕಾರ್ಯಕಾರಿ ಸದಸ್ಯರು ಗಂಗಾಧರ, ಪಂಪಣ್ಣ, ಬಿ.ನೀಲಕಂಠಪ್ಪ, ರಾಮಾಂಜನಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯ ಒಕ್ಕೂಟದ ಗೌರವಾಧ್ಯಕ್ಷ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಶುಭಾಶಯಗಳನ್ನು ತಿಳಿಸಿ ಎಲ್ಲರೂ ಒಗ್ಗಟ್ಟಾಗಿ ತಮ್ಮ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಕಿವಿ ಮಾತು ಹೇಳಿದರು.
