
ಬೆಂಗಳೂರು, 17ಅಕ್ಟೋಬರ್ (ಹಿ.ಸ):
ಆ್ಯಂಕರ್ :
ರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ವೈದ್ಯರು ಬೊಮ್ಮಾಯಿ ಅವರ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಇನ್ನು ಇದಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಬಸವರಾಜ ಬೊಮ್ಮಾಯಿ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು. ಇದೀಗ ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
